Video: ಮತದಾರರ ಅಧಿಕಾರ ಯಾತ್ರೆಯಲ್ಲಿ ಪ್ರಧಾನಿಯ ನಿಂದನೆ, ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ

Updated on: Aug 29, 2025 | 12:39 PM

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ನಿಂದಿಸಿದ್ದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ವೈರಲ್ ಆಗಿದೆ. ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ 'ಮತದಾರರ ಅಧಿಕಾರ ಯಾತ್ರೆ'ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಬಿಹಾರ, ಆಗಸ್ಟ್​ 29: ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಅಧಿಕಾರ ಯಾತ್ರೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್​ ಕಾರ್ಯಕರ್ತರೊಬ್ಬರು ನಿಂದಿಸಿದ್ದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪಕ್ಷದ ಬಾವುಟ ಹಿಡಿದುಕೊಂಡು ಹೊಡೆದಾಡಿಕೊಂಡಿರುವ ವೈರಲ್ ಆಗಿದೆ.

ಬಿಹಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ಮತದಾರರ ಅಧಿಕಾರ ಯಾತ್ರೆ’ಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ತಾಯಿಯನ್ನು ನಿಂದಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ, ಸಿಮ್ರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದೆ ಎಂದು ಪೊಲೀಸರು ಎಕ್ಸ್‌ ಪೋಸ್ಟ್‌ನಲ್ಲಿ ಬರೆದಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More