ಅಧಿಕಾರಿಗಳು ಎಷ್ಟೇ ಕಷ್ಟಪಟ್ಟು ಓದಿದ್ರೂ, ಹೆಬ್ಬೆಟ್ಟು ಹಾಕುವ ಮಂತ್ರಿಗಳ ಮಾತು ಕೇಳಲೇಬೇಕು: ಕಾಂಗ್ರೆಸ್​​ ಸಚಿವೆ

Updated on: Feb 18, 2026 | 12:32 PM

ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ನಡುವಿನ ಸಂಘರ್ಷ ಪ್ರಜಾಪ್ರಭುತ್ವದಲ್ಲಿ ಸಾಮಾನ್ಯ. ತೆಲಂಗಾಣ ಸಚಿವೆ ಕೊಂಡ ಸುರೇಖಾ, 'ರಾಜಕೀಯದಲ್ಲಿ ಹೆಬ್ಬೆಟ್ಟು ಗುರುತಿನವರೂ ಸಿಎಂ ಆಗಬಹುದು, ಆದರೆ ಅಧಿಕಾರಿಗಳು ನಮ್ಮ ಕೆಳಗೆ ಕೆಲಸ ಮಾಡಬೇಕು' ಎಂದು ಹೇಳಿ ಚರ್ಚೆಗೆ ಗ್ರಾಸವಾಗಿದ್ದಾರೆ. ಐಎಎಸ್/ಐಪಿಎಸ್ ಅಧಿಕಾರಿಗಳು ಕಷ್ಟಪಟ್ಟು ಅಧ್ಯಯನ ಮಾಡಿದರೂ, ರಾಜಕೀಯ ನೇತೃತ್ವದ ನಿರ್ದೇಶನಗಳನ್ನು ಪಾಲಿಸಬೇಕು ಎಂಬುದು ಅವರ ವಾದ. ಇದು ಪ್ರಜಾಪ್ರಭುತ್ವದಲ್ಲಿ ಅಧಿಕಾರದ ಹರಿವನ್ನು ಪ್ರತಿಬಿಂಬಿಸುತ್ತದೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಪ್ರತಿನಿಧಿಗಳ ಸ್ಥಾನಮಾನ ಮತ್ತು ಅಧಿಕಾರಿಗಳ ಕಾರ್ಯವೈಖರಿಯ ನಡುವಿನ ಸಮರ ಹೊಸದೇನಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿರುವ ಒಂದು ಮಾತು ಸಾರ್ವಜನಿಕ ಚರ್ಚೆಗೆ ಗ್ರಾಸವಾಗಿದೆ. “ರಾಜಕೀಯದಲ್ಲಿ ಹೆಬ್ಬೆಟ್ಟು ಮುಖ್ಯಮಂತ್ರಿಯಾಗಬಹುದು, ಆದರೆ ಎಷ್ಟೇ ಓದಿ ಅಧಿಕಾರಿಗಳಾದರೂ ಅವರು ನಮ್ಮ ಕೆಳಗೆ ಕೆಲಸ ಮಾಡಬೇಕು ಎಂದು ತೆಲಂಗಾಣದ ಸಚಿವೆ ಕೊಂಡ ಸುರೇಖಾ ಹೇಳಿದ್ದಾರೆ. ಮುಲುಗಿನ ಅರಣ್ಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ (FCRI) ನೆನ್ನೆ (ಫೆ. 17) ನಡೆದ ಕಾರ್ಯಕ್ರಮದಲ್ಲಿ ಈ ಹೇಳಿಕೆ ನೀಡಿದ್ದಾರೆ. ಐಎಎಸ್ ಅಥವಾ ಐಪಿಎಸ್ ಅಧಿಕಾರಿಗಳಾಗುವುದು ಅಷ್ಟು ಸುಲಭವಲ್ಲ. ಅದಕ್ಕಾಗಿ ಅತೀವವಾಗಿ ಶ್ರಮಪಡಬೇಕು, ಹಗಲು-ರಾತ್ರಿ ಓದಬೇಕು. ಅಷ್ಟೆಲ್ಲಾ ಕಷ್ಟಪಟ್ಟು ಅಧಿಕಾರಿಗಳಾದ ಮೇಲೂ, ಅಂತಿಮವಾಗಿ ಅವರು ನಮ್ಮ (ರಾಜಕಾರಣಿಗಳ) ನಿರ್ದೇಶನದಂತೆ ನಡೆಯಬೇಕು” ಎಂದು ಹೇಳಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More