ಬಿಗ್ ಬಾಸ್ ಸ್ಥಗಿತ ಆಗಲು ಜಾಲಿವುಡ್ ಸ್ಟುಡಿಯೋ ಮಾಡಿದ ಮುಖ್ಯ ತಪ್ಪು ಏನು?

Updated on: Oct 08, 2025 | 7:16 PM

ಇತ್ತೀಚೆಗೆ ಶುರುವಾದ ಬಿಗ್ ಬಾಸ್ ಕನ್ನಡ ಸೀಸನ್ 12 ಶೋ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆ ಬಂದ್ ಮಾಡಲಾಗಿದೆ. ಆ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನಾಗೇಂದ್ರಸ್ವಾಮಿ ಸುದ್ದಿಗೋಷ್ಠಿ ನಡೆಸಿದ್ದಾರೆ.

ಇತ್ತೀಚೆಗೆ ಆರಂಭ ಆದ ‘ಬಿಗ್ ಬಾಸ್ ಕನ್ನಡ ಸೀಸನ್ 12’ (Bigg Boss Kannada 12) ಶೋ ಜಾಲಿವುಡ್ ಸ್ಟುಡಿಯೋದಲ್ಲಿ ನಡೆಯುತ್ತಿತ್ತು. ಆದರೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ನೋಟಿಸ್ ಬಂದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಮನೆಯನ್ನು ಬಂದ್ ಮಾಡಲಾಗಿದೆ. ಆ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ (Pollution Control Board) ಅಧ್ಯಕ್ಷರಾದ ನಾಗೇಂದ್ರಸ್ವಾಮಿ ಅವರು ಸುದ್ದಿಗೋಷ್ಠಿ ನಡೆಸಿದ್ದಾರೆ. ಜಾಲಿವುಡ್ ಸ್ಟುಡಿಯೋಸ್ (Jollywood Studios) ಮಾಡಿದ ಪ್ರಮುಖ ತಪ್ಪು ಏನು ಎಂಬುದನ್ನು ಅವರು ವಿವರಿಸಿದ್ದಾರೆ. ‘ಅನುಮತಿ ಇಲ್ಲದೇ ಜಾಲಿವುಡ್ ಸ್ಟುಡಿಯೋ ನಡೆಸುತ್ತಿದ್ದಾರೆ. ಹಲವು ಬಾರಿ ನೋಟಿಸ್ ಕೊಡಲಾಗಿದೆ. ಅದಕ್ಕೆ ಅವರು ಸ್ಪಂದಿಸಿಲ್ಲ. ಹಾಗಾಗಿ ಅವರಿಗೆ ಇತರೆ ವಿಚಾರಗಳನ್ನು ಮಾತನಾಡುವ ಹಕ್ಕು ಇಲ್ಲ’ ಎಂದು ನಾಗೇಂದ್ರಸ್ವಾಮಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.