ಆಡಿಯೋ ಕ್ಲಿಪ್ ವೈರಲ್ ಆದ ಬಳಿಕ ಮಡಿವಾಳೇಶ್ವರ ಮಠದ ಬಸವಸಿದ್ಧಲಿಂಗ ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡರೆ?
ಮಹಿಳೆಯರಿಬ್ಬರು ಸ್ವಾಮೀಜಿ ಕುರಿತು ಮಾತಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಸ್ವಾಮೀಜಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ಸ್ವಾಮೀಜಿ ಮಹಿಳೆಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
ಬೆಳಗಾವಿ: ನಮ್ಮ ಮಠಗಳಿಗೆ ಗ್ರಹಣ ಬಡಿದಂತಿದೆ ಮಾರಾಯ್ರೇ. ಪೋಕ್ಸೋ ಕಾಯ್ದೆ ಅಡಿ ಮುರುಘಾ ಮಠದ ಶಿವಮೂರ್ತಿ ಸ್ವಾಮೀಜಿ ಬಂಧನಕ್ಕೊಳಗಾಗಿರುವ ಬೆನ್ನಲ್ಲೇ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲ್ಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಮಠದ (Guru Madivaleshwara Mutt) ಪೀಠಾಧಿಪತಿ ಬಸವಸಿದ್ಧಲಿಂಗ ಸ್ವಾಮೀಜಿ (Basavasiddhalinga Swamiji) ಡೆತ್ ನೋಟ್ (death Note) ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಹಿಳೆಯರಿಬ್ಬರು ಸ್ವಾಮೀಜಿ ಕುರಿತು ಮಾತಾಡಿರುವ ಆಡಿಯೋ ಕ್ಲಿಪ್ ವೈರಲ್ ಆಗುತ್ತಿದ್ದಂತೆ ಸ್ವಾಮೀಜಿ ಸಾವಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ನಲ್ಲಿ ಸ್ವಾಮೀಜಿ ಮಹಿಳೆಯರ ಹೆಸರುಗಳನ್ನು ಉಲ್ಲೇಖಿಸಿದ್ದಾರೆ.
Latest Videos