ಅಯೋಧ್ಯೆ ರಾಮ ಮಂದಿರ ಉದ್ಘಾಟನೆ: ಗದಗದ ಮಸೀದಿಯಲ್ಲಿ ಪೂಜೆ, ಹೋಮ
ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.
ಗದಗ, ಜ.22: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ (Ayodhya Ram Mandir) ಹಿನ್ನೆಲೆಯಲ್ಲಿ ಗದಗ ಗ್ರಾಮದ ಮಸೀದಿಯೊಂದರಲ್ಲಿ (Masjid) ಪೂಜೆ, ಹೋಮ ನೆರವೇರಿಸಲಾಗಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಮಸೀದಿಯಲ್ಲಿ ಹೋಮ-ಹವನ ಮಾಡುವ ಮೂಲಕ ಭಾವೈಕ್ಯತೆ ಮೆರೆಯಲಾಗಿದೆ. ಗ್ರಾಮದ ಹಿಂದೂ ಮುಸ್ಲಿಂ ಮುಖಂಡರು ಸೇರಿ ಕಾರ್ಯಕ್ರಮ ಪೂರ್ಣಗೊಳಿಸಿದ್ದಾರೆ.
ರುದ್ರಾಭಿಷೇಕ ಮಾಡಿ, ಭಾರತಮಾತೆಯ ಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದ್ದಾರೆ. ರಂಜಾನ್ ತಿಂಗಳಲ್ಲಿ ಪೂಜಿಸುವ ಆಲಿ ದೇವರ ಸಮ್ಮುಖದಲ್ಲಿ ಭಾರತ ಮಾತೆ ಫೋಟೋಗೆ ಪೂಜೆ ಸಲ್ಲಿಸಲಾಗಿದೆ. ಭಾರತ ಮಾತೆ ಚಿತ್ರದ ಜೊತೆಗೆ ಕಳಸವಿಟ್ಟು ರುದ್ರಾಭಿಷೇಕ, ಪೂಜೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಮಸೀದಿ ಕಮೀಟಿಯ ರಾಜೆಸಾಬ್, ರುತುಂ ಸಾಬ್ ಸೇರಿದಂತೆ ಗ್ರಾಮಸ್ಥರು ಭಾಗಿಯಾಗಿದ್ರು.
ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ