ನೂತನ ಸಚಿವರಿಗೆ ಇಂದೇ ಖಾತೆ ಹಂಚಿಕೆ?: ಮಂತ್ರಿಗಳಿಗೆ ಖಡಕ್​​ ಸೂಚನೆ ಕೊಟ್ಟಿದ್ದೇಕೆ ಹೈಕಮಾಂಡ್​​?

Updated on: Aug 06, 2026 | 4:33 PM

ಸಿಎಂ ಡಿಕೆ ಶಿವಕುಮಾರ್​​ ಸಚಿವ ಸಂಪುಟದ ನೂತನ ಸಚಿವರಿಗೆ ಇಂದು ರಾತ್ರಿಯೊಳಗೆ ಖಾತೆ ಹಂಚಿಕೆ ಆಗುವ ಸಾಧ್ಯತೆ ಇದೆ. ಮುಖ್ಯಮಂತ್ರಿಗಳು ಹೈಕಮಾಂಡ್ ನಾಯಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಖಾತೆ ಹಂಚಿಕೆಯ ನಂತರ ಅಸಮಾಧಾನ ಭುಗಿಲೇಳುವ ಸಾಧ್ಯತೆಗಳಿರುವುದರಿಂದ, ಯಾವುದೇ ಖಾತೆ ಸಿಕ್ಕರೂ ಕಾರ್ಯನಿರ್ವಹಿಸುವಂತೆ ಹೈಕಮಾಂಡ್ ಸಚಿವರಿಗೆ ಸಂದೇಶ ನೀಡಿದೆ ಎನ್ನಲಾಗಿದೆ.

ಬೆಂಗಳೂರು, ಆಗಸ್ಟ್​​ 06: ಕರ್ನಾಟಕದಲ್ಲಿ ನೂತನವಾಗಿ ಪ್ರಮಾಣವಚನ ಸ್ವೀಕರಿಸಿದ ಸಚಿವರಿಗೆ ಇಂದು ಖಾತೆ ಹಂಚಿಕೆ ಆಗುವ ಸಾಧ್ಯತೆ ಇದೆ. ಇಂದು ರಾತ್ರಿಯೊಳಗೆ 19 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡುವ ನಿರೀಕ್ಷೆಯಿದೆ.ಈ ಸಂಬಂಧ ಹೈಕಮಾಂಡ್ ನಾಯಕರ ಜೊತೆ ಸಿಎಂ ಡಿ.ಕೆ.ಶಿವಕುಮಾರ್ ನಿನ್ನೆ ತಡರಾತ್ರಿ ಒಂದು ಸುತ್ತಿನ ಸಭೆ ನಡೆಸಿದ್ದಾರೆ. ಹೀಗಿದ್ದರೂ ಮತ್ತೊಂದು ಸುತ್ತಿನ ಚರ್ಚೆ ಬಳಿಕ ಅಂತಿಮ ನಿರ್ಧಾರವಾಗಲಿದೆ. ನೂತನ ಸಚಿವರಿಗೆ ಖಾತೆ ಹಂಚಿದರೂ ಅಸಮಾಧಾನ ಭುಗಿಲೇಳುವ ಸಾಧ್ಯತೆ ಇರುವ ಕಾರಣ ಹೀಗಾಗಿ ಯಾವುದೇ ಖಾತೆ ನೀಡಿದರೂ ಕಾರ್ಯ ನಿರ್ವಹಿಸುವಂತೆ ನೂತನ ಸಚಿವರಿಗೆ ಹೈಕಮಾಂಡ್ ನಾಯಕರು ಸಂದೇಶ ರವಾನಿಸಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More