ಕೋವಿಡ್ ನಂತರದ ದಿನಗಳಲ್ಲಿ ಸಿದ್ದರಾಮಯ್ಯ ಕೇವಲ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ: ಎಸ್ ಟಿ ಸೋಮಶೇಖರ್, ಸಚಿವರು

Updated By: ಅರುಣ್​ ಕುಮಾರ್​ ಬೆಳ್ಳಿ

Updated on: Aug 18, 2022 | 2:58 PM

ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಅವರು ಆಡುತ್ತಿದ್ದ ಮಾತಿಗೆ ತೂಕವಿರುತ್ತಿತ್ತು, ಆದರೆ ಕೋವಿಡ್ ನಂತರದ ದಿನಗಳಲ್ಲಿ ಅವರು ಕೇವಲ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತ ಸಚಿವರು ಹೇಳಿದರು.

ಬೆಂಗಳೂರು: ಹಿಂದೆ ಸಿದ್ದರಾಮಯ್ಯನವರ (Siddaramaiah) ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಈಗಿನ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ (ST Somashekhar) ಅವರು ತಮ್ಮ ಗುರುವಿನ ವಿರುದ್ಧವೇ ಖಾರವಾದ ಪ್ರತಿಕ್ರಿಯೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ಬೆಂಗಳೂರಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತಾಡಿದ ಸಚಿವರು ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿದ್ದಾಗ ಅವರು ಆಡುತ್ತಿದ್ದ ಮಾತಿಗೆ ತೂಕವಿರುತ್ತಿತ್ತು, ಆದರೆ ಕೋವಿಡ್ ನಂತರದ ದಿನಗಳಲ್ಲಿ ಅವರು ಕೇವಲ ವಿವಾದಾತ್ಮಕ ಹೇಳಿಕೆಗಳನ್ನು ನೀಡುತ್ತಿದ್ದಾರೆ ಅಂತ ಹೇಳಿದರು.