ಕೇರಳಂಗೆ ಪ್ರವಾಸ ಸದ್ಯಕ್ಕೆ ಬೇಡ, ಪ್ಲಾನ್ ಇದ್ದರೆ ಮುಂದೂಡಿ: ಸರ್ಕಾರದಿಂದ ಮಹತ್ವದ ಸಲಹೆ

Updated on: May 18, 2026 | 7:30 AM

ಅರಬ್ಬಿ ಸಮುದ್ರದಲ್ಲಿ ಪೂರ್ವ ಮುಂಗಾರು ಅಬ್ಬರ ಚುರುಕಾಗಿದ್ದು, ಕೇರಳದ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಗಳಿರುವುದರಿಂದ, ಕೇರಳಕ್ಕೆ ಪ್ರವಾಸವನ್ನು ಮುಂದೂಡುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಪ್ರವಾಸಿಗರು ಮತ್ತು ಅನಗತ್ಯ ಸಂದರ್ಶಕರು ಪ್ರಸ್ತುತ ಕೇರಳಕ್ಕೆ ಪ್ರಯಾಣಿಸದಿರುವುದು ಸೂಕ್ತ.

ಬೆಂಗಳೂರು, ಮೇ 18: ಅರಬ್ಬಿ ಸಮುದ್ರದಲ್ಲಿ ಮುಂಗಾರು ಪೂರ್ವ ಅಲೆಗಳ ಅಬ್ಬರ ಚುರುಕುಗೊಂಡಿದ್ದು, ಕೇರಳಂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಪ್ರಸ್ತುತ ಕೇರಳಂನ ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಒಂಬತ್ತು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಆರ್ಭಟ ಹಾಗೂ ಬಿರುಗಾಳಿ ಸಹಿತ ಮಳೆ ನಿರಂತರವಾಗಿ ಸುರಿಯುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಕೇರಳಕ್ಕೆ ಪ್ರವಾಸದ ಪ್ಲಾನ್ ಇದ್ದರೆ ಮುಂದೂಡುವಂತೆ ಸಾರ್ವಜನಿಕರಿಗೆ ಸಲಹೆ ನೀಡಿದೆ. ಪ್ರಸ್ತುತ ಕೇರಳಕ್ಕೆ ಪ್ರಯಾಣಿಸಲು ಯೋಜನೆ ರೂಪಿಸಿಕೊಂಡಿರುವವರು ನಿರ್ಧಾರವನ್ನು ಸದ್ಯಕ್ಕೆ ಕೈಬಿಡುವುದು ಸೂಕ್ತ ಎಂದು ಸೂಚಿಸಲಾಗಿದೆ. ಭಾರೀ ಮಳೆಯಿಂದ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸಲು ಈ ಎಚ್ಚರಿಕೆ ನೀಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More