AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

'ಮೈಲೇಜ್ ಕುಸಿತಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ': ಎಥೆನಾಲ್ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

‘ಮೈಲೇಜ್ ಕುಸಿತಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ’: ಎಥೆನಾಲ್ ಬಗ್ಗೆ ಕಾಂಗ್ರೆಸ್ ಆರೋಪಕ್ಕೆ ಅಶೋಕ್ ತಿರುಗೇಟು

ಹರೀಶ್ ಜಿ.ಆರ್​.
| Edited By: |

Updated on:Nov 12, 2026 | 5:33 PM

Share

ಆರ್‌. ಅಶೋಕ್ ಎಥೆನಾಲ್ ಮಿಶ್ರಿತ ಪೆಟ್ರೋಲ್‌ನಿಂದ ದೇಶಕ್ಕೆ ಲಾಭವಾಗಿದೆ, ರೈತರಿಗೆ ಆದಾಯ ಹೆಚ್ಚಿದೆ ಎಂದಿದ್ದಾರೆ. ಮೈಲೇಜ್ ಕುಸಿತಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ ಹೊರತು ಇಂಧನವಲ್ಲ ಎಂದು ಕಾಂಗ್ರೆಸ್ ಆರೋಪವನ್ನು ತಳ್ಳಿಹಾಕಿದ್ದಾರೆ. ಗುಂಡಿಗಳನ್ನು ಮುಚ್ಚುವ ಮೂಲಕ ಮೈಲೇಜ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಕೌಂಟರ್​​ ಕೊಟ್ಟಿದ್ದಾರೆ.

ಬೆಂಗಳೂರು, ನವೆಂಬರ್​​ 12: ಎಥೆನಾಲ್ ಮಿಶ್ರಿತ ಪೆಟ್ರೋಲ್ ಕುರಿತು ಕಾಂಗ್ರೆಸ್ ನಾಯಕರು ಮಾಡುತ್ತಿರುವ ಆರೋಪಗಳಿಗೆ ಆರ್‌. ಅಶೋಕ್ ಖಾರವಾಗಿ ತಿರುಗೇಟು ನೀಡಿದ್ದಾರೆ. ಎಥೆನಾಲ್ ಮಿಶ್ರಣದಿಂದ ದೇಶಕ್ಕೆ 1.90 ಲಕ್ಷ ಕೋಟಿ ವಿದೇಶಿ ವಿನಿಮಯ ಉಳಿತಾಯವಾಗಿದೆ. 310 ಲಕ್ಷ ಮೆಟ್ರಿಕ್ ಟನ್ ಕಚ್ಚಾ ತೈಲ ಬಳಕೆ ಕಡಿಮೆ ಮಾಡಲಾಗಿದೆ ಮತ್ತು 930 ಲಕ್ಷ ಮೆಟ್ರಿಕ್ ಟನ್ ಇಂಗಾಲದ ಡೈಆಕ್ಸೈಡ್ ಹೊರಸೂಸುವಿಕೆ ತಪ್ಪಿಸಲಾಗಿದೆ. ರೈತರಿಗೆ ಇದರಿಂದ 1.60 ಲಕ್ಷ ಕೋಟಿ ಹೆಚ್ಚುವರಿ ಆದಾಯ ಲಭಿಸಿದೆ ಎಂದು ಅವರು ಹೇಳಿದ್ದಾರೆ. ಪೆಟ್ರೋಲ್ ಮೈಲೇಜ್ ಕಡಿಮೆಯಾಗಿದೆ ಎಂಬ ಆರೋಪಕ್ಕೂ ಪ್ರತಿಕ್ರಿಯಿಸಿದ ಅಶೋಕ್, ಮೈಲೇಜ್ ಕುಸಿತಕ್ಕೆ ಎಥೆನಾಲ್ ಕಾರಣವಲ್ಲ, ಬದಲಾಗಿ ರಾಜ್ಯದ ರಸ್ತೆಗಳಲ್ಲಿನ ಗುಂಡಿಗಳೇ ಕಾರಣ ಎಂದು ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ವಾಹನಗಳ ಸರಾಸರಿ ವೇಗ 18 ಕಿಲೋಮೀಟರ್‌ನಿಂದ 11 ಕಿಲೋಮೀಟರ್‌ಗೆ ಇಳಿದಿದ್ದು, ಇದಕ್ಕೆ ಗುಂಡಿ ಬಿದ್ದ ರಸ್ತೆಗಳೇ ಕಾರಣ. ಗುಂಡಿಗಳನ್ನು ಮುಚ್ಚುವ ಮೂಲಕ ಮೈಲೇಜ್ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು ಎಂದು ಅವರು ಕೌಂಟರ್​​ ಕೊಟ್ಟಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Published on: Nov 12, 2026 05:33 PM

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More