ಅಧಿಕಾರ ಪಿತ್ರಾರ್ಜಿತ ಆಸ್ತಿಯಲ್ಲ, ಸಿದ್ದರಾಮಯ್ಯ ಅದನ್ನು ಬಳುವಳಿಯಾಗಿ ಪಡೆದಿಲ್ಲ: ಸ್ನೇಹಮಯಿ ಕೃಷ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Apr 17, 2025 | 3:04 PM

ಮುಖ್ಯಮಂತ್ರಿಯಾಗಿ ತಾನೇ 5 ವರ್ಷ ಮುಂದುವರಿಯುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರೆ ನೀವು ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುತ್ತೀರಲ್ಲ ಅಂದಾಗ, ಅಧಿಕಾರ ಅನ್ನೋದು ಪಿತ್ರಾರ್ಜಿತ ಆಸ್ತಿಯಲ್ಲ, ಅದನ್ನು ಸಿದ್ದರಾಮಯ್ಯ ಬಳುವಳಿಯಾಗಿ ಪಡೆದುಕೊಂಡಿಲ್ಲ, ಜನ ಅವರಿಗೆ ಅಧಿಕಾರ ಕೊಟ್ಟಿದ್ದಾರೆ ಮತ್ತು ಅವರೇ ಅಲ್ಲಿಂದ ಕೆಳಗಿಳಿಸುತ್ತಾರೆ ಎಂದು ಕೃಷ್ಣ ಹೇಳಿದರು.

ಮೈಸೂರು, ಏಪ್ರಿಲ್ 17: ಜಯಪ್ರಕಾಶ್ ಹೆಗಡೆಯವರು ಒಂದು ವರ್ಷದ ಹಿಂದೆಯೇ ಸರ್ಕಾರಕ್ಕೆ ಸಲ್ಲಿಕೆ ಮಾಡಿದ ಜಾತಿ ಗಣತಿ ವರದಿಯನ್ನು ಇದುವರೆಗೆ ಬಿಡುಗಡೆ ಮಾಡದೆ ಮೀನ ಮೀಷ ಎಣಿಸುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಈಗ ಅದರ ಬಗ್ಗೆ ಮಾತಾಡುತ್ತಿರುವುದು ತಮ್ಮ ಆಧಿಕಾರ ಉಳಿಸಿಕೊಳ್ಳಲು ನಡೆಸುತ್ತಿರುವ ವ್ಯರ್ಥ ಪ್ರಯತ್ನವಲ್ಲದೆ ಬೇರೇನೂ ಅಲ್ಲ ಎಂದು ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೇಳಿದರು. ಮೈಸೂರಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಸಿದ್ದರಾಮಯ್ಯ ಆಧಿಕಾರದಲ್ಲಿ ಮುಂದುವರಿಯಲು ಕಸರತ್ತು ನಡೆಸಿದ್ದಾರೆ, ಅದರೆ ಅವರು ಜನರನ್ನು ಮೂರ್ಖರನ್ನಾಗಿಸುವುದು ಸಾಧ್ಯವಿಲ್ಲ, ದುರಹಂಕಾರದ ಮಾತುಗಳನ್ನಾಡುತ್ತಿರುವ ಅವರನ್ನು ಜನ ಅಧಿಕಾರದಿಂದ ಇಳಿಸಿಯೇ ತೀರುತ್ತಾರೆ ಎಂದು ಕೃಷ್ಣ ಹೇಳಿದರು.

ಇದನ್ನೂ ಓದಿ:  ಮುಡಾ ಹಗರಣ: ಹಲವು ದಾಖಲೆಗಳನ್ನು ನೀಡಿದ್ದೇ ಕಾಂಗ್ರೆಸ್ ಪಕ್ಷದವರು! ಸ್ನೇಹಮಯಿ ಕೃಷ್ಣ ಶಾಕಿಂಗ್ ಹೇಳಿಕೆ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.