AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ

ಅಧಿಕಾರ ಹಂಚಿಕೆ ಒಪ್ಪಂದ ಆಗಿದೆ, 40-50 ಶಾಸಕರು ಡಿಕೆಶಿಗಾಗಿ ಪ್ರಾಣ ಕೊಡಲೂ ಸಿದ್ಧ: ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Feb 07, 2026 | 11:59 AM

Share

ಡಿಕೆ ಶಿವಕುಮಾರ್​​ಗೆ ಕಾಂಗ್ರೆಸ್​​ನ ಎಲ್ಲ 139 ಶಾಕರ ಬೆಂಬಲ ಇದ್ದು, 40-50 ಜನ ಯುವ ಶಾಸಕರು ಅವರಿಗಾಗಿ ಏನು ಬೇಕಾದರೂ ಮಾಡಲು ಸಿದ್ಧ. ಅಧಿಕಾರ ಹಂಚಿಕೆ ಒಪ್ಪಂದ ಆಗಿರುವುದು ನಿಜ. ಒಂದು ವೇಳೆ ಆಗಿಲ್ಲ ಎಂದಾದರೆ ಹೈಕಮಾಂಡ್ ಮಧ್ಯ ಪ್ರವೇಶಿಸಿ ಸ್ಪಷ್ಟಪಡಿಸಲಿ ಎಂದು ಶಾಸಕ ಬಸವರಾಜ ಶಿವಗಂಗಾ ಹೇಳಿದ್ದಾರೆ. ಅಲ್ಲದೆ. ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಈ ಬೆಳವಣಿಗೆಗಳ ಮೇಲೆ ಗಮನ ಹರಿಸುತ್ತಾರೆ ಎಂಬ ವಿಶ್ವಾಸವಿದೆ. ಪಕ್ಷದ ಒಳಗಿನ ಗೊಂದಲಗಳಿಗೆ ಶೀಘ್ರದಲ್ಲೇ ಸ್ಪಷ್ಟನೆ ಸಿಗಬೇಕು ಎಂದು ಆಗ್ರಹಿಸಿದ್ದಾರೆ.

ದಾವಣಗೆರೆ, ಫೆಬ್ರವರಿ 7: ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ನಾಯಕತ್ವ ವಿಚಾರ ಮತ್ತೆ ಚರ್ಚೆಗೆ ಗ್ರಾಸವಾಗಿರುವ ಮಧ್ಯೆ, ಚನ್ನಗಿರಿ ಶಾಸಕ ಬಸವರಾಜ ಶಿವಗಂಗಾ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದು ರಾಜಕೀಯ ವಲಯದಲ್ಲಿ ಕುತೂಹಲ ಹುಟ್ಟಿಸಿದೆ. ಅಧಿಕಾರ ಹಂಚಿಕೆ ಕುರಿತ ಒಪ್ಪಂದ ಈಗಾಗಲೇ ಆಗಿದೆ ಎಂಬ ಮಾಹಿತಿ ನನಗೆ ಇದೆ ಎಂದು ಅವರು ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್‌ನ ಎಲ್ಲ 139 ಬಹುತೇಕ ಶಾಸಕರ ಬೆಂಬಲವಿದೆ. ಇದಕ್ಕೂ ಮೀರಿ ನಮ್ಮಂತಹ 40-50 ಯುವ ಶಾಸಕರು ಡಿಕೆಶಿ ಏನೇ ಹೇಳಿದರೂ ಮಾಡಲು ಸಿದ್ಧರಾಗಿದ್ದೇವೆ. ಅಗತ್ಯವಿದ್ದರೆ ಪ್ರಾಣ ಕೊಡಲೂ ಸಿದ್ಧವೆಂದು ಹೇಳಿದರು.

ಅಧಿಕಾರ ಹಂಚಿಕೆ ಕುರಿತು ಒಪ್ಪಂದ ಆಗಿರುವ ಬಗ್ಗೆ ನನಗೆ ಸ್ಪಷ್ಟ ಮಾಹಿತಿ ಇದೆ. ಈ ಬಗ್ಗೆ ಹೈಕಮಾಂಡ್ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದರು. ಯತೀಂದ್ರ ಸಿದ್ದರಾಮಯ್ಯ ಪದೇಪದೇ ನಾಯಕತ್ವ ವಿಚಾರವಾಗಿ ಹೇಳಿಕೆ ನೀಡುತ್ತಿರುವುದು ಪಕ್ಷದ ಒಳಚರ್ಚೆಗೆ ಕಾರಣವಾಗಿದೆ. ಯತೀಂದ್ರ ಹೇಳಿಕೆ ಬಗ್ಗೆ ಪಕ್ಷದ ಹೈಕಮಾಂಡ್‌ವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More