ಎಲ್ಲರಿಗೂ ಸಿದ್ದರಾಮಯ್ಯ ಉತ್ತರ ಕೊಡುತ್ತಾರೆ: ಮತ್ತೆ ಕೊಟ್ಟ ಮಾತು ನೆನಪಿಸಿದ್ರಾ ಡಿಕೆ ಶಿವಕುಮಾರ್?

Edited By:

Updated on: Feb 18, 2026 | 9:48 AM

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ ಅಧಿಕಾರ ಹಂಚಿಕೆ ಕುರಿತು ಬಿಕ್ಕಟ್ಟು ತೀವ್ರಗೊಂಡಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹಿಂದಿನ ಒಪ್ಪಂದದ ಬಗ್ಗೆ ಪದೇ ಪದೇ ಪ್ರಸ್ತಾಪಿಸಿ, ಸೂಕ್ತ ಸಮಯದಲ್ಲಿ ಸಿಎಂ ಸಿದ್ದರಾಮಯ್ಯನವರೇ ಜನರಿಗೆ ಸಂದೇಶ ನೀಡುತ್ತಾರೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಒಪ್ಪಂದವನ್ನು ನಿರಾಕರಿಸಿದರೂ, ಈ ಕುರಿತು ಕಾಂಗ್ರೆಸ್‌ನಲ್ಲಿ ಭಾರಿ ಚರ್ಚೆ ನಡೆಯುತ್ತಿದೆ.

ಬೆಂಗಳೂರು, ಫೆಬ್ರವರಿ 18: ಶಾಸಕರ ವಿದೇಶ ಪ್ರವಾಸದೊಂದಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಮತ್ತೆ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನಡುವಣ ಮುಸುಕಿನ ರಾಜಕೀಯ ತಿಕ್ಕಾಟ ತೀವ್ರಗೊಂಡಿದೆ. ಡಿಕೆ ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ಕುರಿತು ಆದ ಒಪ್ಪಂದವನ್ನು ನೆನಪಿಸುತ್ತಿದ್ದು, ಸೂಕ್ತ ಸಮಯ ಬಂದಾಗ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಜನರಿಗೆ ಉತ್ತರ ನೀಡುತ್ತಾರೆ ಎಂದು ಹೇಳಿದ್ದಾರೆ.

ಈ ನಡುವೆ, ಸಚಿವ ಹೆಚ್​ಸಿ ಮಹದೇವಪ್ಪ ‘ಬೀದಿ ನಾಯಿ’ ಪದ ಬಳಸಿದ್ದಕ್ಕೆ ಡಿಕೆ ಸುರೇಶ್ ಕೌಂಟರ್ ಕೊಟ್ಟಿದ್ದಾರೆ. ಕಟ್ಟಾ ಕಾಂಗ್ರೆಸ್ಸಿಗರು ನಿಯತ್ತಿನ ನಾಯಿಗಳು ಎಂದು ಡಿಕೆ ಸುರೇಶ್ ತಿರುಗೇಟು ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Feb 18, 2026 09:47 AM
Loading...
Unable to load recommendations.
Follow Us
ಪ್ರಸನ್ನ ಗಾಂವ್ಕರ್​

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More