ಧಾರವಾಡದ ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ

Edited By:

Updated on: Jul 28, 2026 | 12:40 PM

Dharwad News: ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ಬೆಂಗಳೂರು–ಬೆಳಗಾವಿ ಎಕ್ಸ್‌ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವು ರೈಲುಗಳು ನಾಲ್ಕು ಗಂಟೆಗೂ ಹೆಚ್ಚು ಕಾಲ ನಿಂತಿದ್ದು, ಪ್ರಯಾಣಿಕರು ಪರದಾಡಿದರು. ರೈಲು ನಿಲ್ದಾಣದಲ್ಲಿನ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.

ಧಾರವಾಡ, ಜುಲೈ 28: ವಿದ್ಯುತ್ ಪೂರೈಕೆಯಲ್ಲಿ ಉಂಟಾದ ತಾಂತ್ರಿಕ ಸಮಸ್ಯೆಯಿಂದ ಧಾರವಾಡ ಜಿಲ್ಲೆಯ ಅಳ್ನಾವರ ರೈಲು ನಿಲ್ದಾಣದಲ್ಲಿ ನಾಲ್ಕು ಗಂಟೆಗೂ ಅಧಿಕ ಕಾಲ ಹಲವು ರೈಲುಗಳು ನಿಂತ ಪರಿಣಾಮ ಪ್ರಯಾಣಿಕರು ಪರದಾಡುವಂತಾಯಿತು. ಲೋಂಡಾ ಭಾಗದಲ್ಲಿ ಉಂಟಾದ ವಿದ್ಯುತ್ ಪೂರೈಕೆ ಸಮಸ್ಯೆಯಿಂದ ಬೆಂಗಳೂರು–ಬೆಳಗಾವಿ ಎಕ್ಸ್‌ಪ್ರೆಸ್ ಹಾಗೂ ರಾಣಿ ಚೆನ್ನಮ್ಮ ಎಕ್ಸ್‌ಪ್ರೆಸ್ ಸೇರಿದಂತೆ ಕೆಲವು ರೈಲುಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಪರಿಣಾಮವಾಗಿ ರೈಲುಗಳನ್ನು ಅಳ್ನಾವರ ರೈಲು ನಿಲ್ದಾಣದಲ್ಲೇ ನಿಲ್ಲಿಸಲಾಯಿತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More