ತೀವ್ರಗೊಂಡ ಕುರ್ಚಿ ಕಿತ್ತಾಟ: ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ ಮಾಡಿ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು (ಡಿಸೆಂಬರ್ 23) ದೆಹಲಿ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆದ್ರೆ, ಇತ್ತ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶಿಸಲು ಅಹಿಂದ ಸಮಾವೇಶಕ್ಕೆ ಸಿದ್ಧತೆಗಳು ನಡೆದಿವೆ.
ಮೈಸೂರು, (ಡಿಸೆಂಬರ್ 23): ಹೈಕಮಾಂಡ್.. ಹೈಕಮಾಂಡ್.. ಹೈಕಮಾಂಡ್.. ನಾಯಕತ್ವ ಬದಲಾವಣೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ (Congress) ನಾಯಕರಲ್ಲಿ ಯಾರನ್ನೇ ಕೇಳಿದರೂ ಸಹ ಎಲ್ಲರ ಬೆರಳು ನೇರವಾಗಿ ಹೈಕಮಾಂಡ್ ಕಡೆಗೆ ತಿರುಗುತ್ತೆ. ಆದ್ರೆ ಗೊಂದಲ ಬಗೆಹರಿಸಿಬೇಕಿದ್ದ ಹೈಕಮಾಂಡ್ನ ಭಾಗವಾಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೊಂದಲ ಸೃಷ್ಟಿ ಮಾಡಿದ್ದು ಹೈಕಮಾಂಡ್ ಅಲ್ಲ.ಇಲ್ಲಿ ಲೋಕಲ್ ಆಗಿ ಏನ್ ಆಗಿದೆಯೋ ಇಲ್ಲೇ ಸೆಟಲ್ ಮಾಡಿಕೊಳ್ಳಿ ಎಂದಿದ್ದಾರೆ. ಇದರಿಂದ ಸಿದ್ದರಾಮಯ್ಯ (Siddaramaiah), ಡಿಕೆ ಶಿವಕುಮಾರ್ (DK Shivakumar) ಬಣಗಳಲ್ಲಿ ಗೊಂದಲ ಸೃಷ್ಟಿಸಿದೆ. ಹೇಗಾದರೂ ಮಾಡಿ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿರುವ ಡಿಸಿಎಂ ಡಿಕೆ ಶಿವಕುಮಾರ್ ಇಂದು (ಡಿಸೆಂಬರ್ 23) ದೆಹಲಿ ತೆರಳಿದ್ದು, ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆದ್ರೆ, ಇತ್ತ ಸಿದ್ದರಾಮಯ್ಯನವರ ಶಕ್ತಿ ಪ್ರದರ್ಶಿಸಲು ಅಹಿಂದ ಸಮಾವೇಶಕ್ಕೆ ಸಿದ್ಧತೆಗಳು ನಡೆದಿವೆ.
ಇದನ್ನೂ ನೋಡಿ: ಸಿಎಂ ಕುರ್ಚಿ ಕಿತ್ತಾಟ ತಾರಕಕ್ಕೆ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಹೌದು..ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕೆಂದು ಹಠಕ್ಕೆ ಬಿದ್ದಿದ್ದರಿಂದ ಇತ್ತ ಸಿದ್ದರಾಮಯ್ಯ ಪರವಾಗಿ ಅಹಿಂದ ಸಮಾವೇಶ ಮಾಡಲು ಸಿದ್ಧತೆಗಳು ನಡೆದಿವೆ. ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಅಹಿಂದ ಸಮಾವೇಶ ಮಾಡಲು ತೀರ್ಮಾನಿಸಲಾಗಿದ್ದು, ಈ ಸಂಬಂಧ ಚರ್ಚಿಸಲು ನಾಳೆ (ಡಿಸೆಂಬರ್ 23) ಬೆಳಗ್ಗೆ 11.30ಕ್ಕೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಪೂರ್ವಭಾವಿ ಸಭೆ ಕರೆದಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಸಂಚಲನ ಮೂಡಿಸಿದ್ದು, ಸಮಾವೇಶ ಯಾವಾಗ ನಡೆಸಬೇಕೆನ್ನುವುದನ್ನು ನಾಳಿನ ಸಭೆಯಲ್ಲಿ ತೀರ್ಮಾನವಾಗಲಿದೆ.
ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

