ಸಭೆಗೆ ಆಹ್ವಾನವಿಲ್ಲ: ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

Updated on: Dec 25, 2025 | 4:04 PM

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಕೆಶಿ, ಇಂದು (ಡಿಸೆಂಬರ್ 25) ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ. ಸಿಎಂ ಸಿದ್ದರಾಮಯ್ಯರನ್ನು ಸಿಡಬ್ಲ್ಯುಸಿ ಸಭೆಗೆ ಕರೆದ ಮಾಹಿತಿ ಇದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಹೋಗುತ್ತಾರೆ ಎಂದರು. 

ಬೆಂಗಳೂರು, (ಡಿಸೆಂಬರ್ 25): ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ (DK Shivakumar) ನಡುವಿನ ಮುಸುಕಿನ ಗುದ್ದಾಟ ಮುಂದುವರೆದಿದೆ. ಈ ನಡುವೆ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಭೇಟಿಗೆ ಯತ್ನಿಸಿದ್ದಾರೆ. ಆದ್ರೆ ಅದು ಆಗದಿದ್ದಕ್ಕೆ ಬರಿಗೈನಲ್ಲೇ ವಾಪಸ್ ಆಗಿದ್ದಾರೆ. ಇತ್ತ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (CWC) ಸಭೆಗೆ ಡಿಕೆಶಿಗೆ ಆಹ್ವಾನ ಬಂದಿಲ್ಲ. ಬದಲಿಗೆ ಸಿಎಂ ಸಿದ್ದರಾಮಯ್ಯಗೆ ಮಾತ್ರ ಆಹ್ವಾನ ನೀಡಲಾಗಿದೆ. ಹೀಗಾಗಿ ನಾಳೆ(ಡಿಸೆಂಬರ್ 26) ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಕೆಶಿ, ಇಂದು (ಡಿಸೆಂಬರ್ 25) ಬೆಂಗಳೂರಿನಲ್ಲಿ ದಿಢೀರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಮಹತ್ವದ ಚರ್ಚೆ ಮಾಡಿದ್ದಾರೆ. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಿಕೆಶಿ, ಡಿಸೆಂಬರ್ 27ರಂದು ದೆಹಲಿಯಲ್ಲಿ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆ ಇದ್ದು, ಸಿಡಬ್ಲ್ಯುಸಿ ಸಭೆಗೆ ನನ್ನನ್ನು ಕರೆದಿಲ್ಲ. ಕರೆದರೆ ನಾನು ಹೋಗುತ್ತೇನೆ. ಸಿಎಂ ಸಿದ್ದರಾಮಯ್ಯರನ್ನು ಸಿಡಬ್ಲ್ಯುಸಿ ಸಭೆಗೆ ಕರೆದ ಮಾಹಿತಿ ಇದ್ದು, ಸಭೆಯಲ್ಲಿ ಭಾಗಿಯಾಗಲು ಸಿಎಂ ದೆಹಲಿಗೆ ಹೋಗುತ್ತಾರೆ ಎಂದರು.  ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ