Afghanistan Earthquake: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ, 7 ಮಂದಿ ಸಾವು, ಮನೆಗಳು ನೆಲಸಮ

Updated on: Nov 03, 2025 | 9:30 AM

ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಧರೆಗುರುಳಿವೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಖುಲ್ಮ್‌ನಿಂದ ಪಶ್ಚಿಮ-ನೈಋತ್ಯಕ್ಕೆ 22 ಕಿ.ಮೀ ದೂರದಲ್ಲಿದೆ ಮತ್ತು 28 ಕಿ.ಮೀ ಆಳದಲ್ಲಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ. ಮಧ್ಯರಾತ್ರಿ 12.59ರ ಸುಮಾರಿಗೆ ಭೂಕಂಪ ಸಂಭವಿಸಿದೆ. ಕಳೆದ ವಾರವಷ್ಟೇ, ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿತ್ತು. ಆಗಸ್ಟ್ 31 ರಂದು ಪಾಕಿಸ್ತಾನ ಗಡಿಯ ಬಳಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪವು 2,200 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು.

ಕಾಬೂಲ್, ನವೆಂಬರ್ 03: ಅಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಹಲವು ಮನೆಗಳು ಕುಸಿದಿವೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದ ಖುಲ್ಮ್‌ನಿಂದ ಪಶ್ಚಿಮ-ನೈಋತ್ಯಕ್ಕೆ 22 ಕಿ.ಮೀ ದೂರದಲ್ಲಿದೆ ಮತ್ತು 28 ಕಿ.ಮೀ ಆಳದಲ್ಲಿದೆ ಎಂದು ಯುಎಸ್‌ಜಿಎಸ್ ತಿಳಿಸಿದೆ. ಮಧ್ಯರಾತ್ರಿ 12.59 ಸುಮಾರಿಗೆ ಭೂಕಂಪ ಸಂಭವಿಸಿದೆ. ಕಳೆದ ವಾರವಷ್ಟೇ, ಅಫ್ಘಾನಿಸ್ತಾನದಲ್ಲಿ 4.3 ತೀವ್ರತೆಯ ಮತ್ತೊಂದು ಭೂಕಂಪ ಸಂಭವಿಸಿತ್ತು. ಆಗಸ್ಟ್ 31 ರಂದು ಪಾಕಿಸ್ತಾನ ಗಡಿಯ ಬಳಿ ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.0 ತೀವ್ರತೆಯ ಭೂಕಂಪವು 2,200 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿತ್ತು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Nov 03, 2025 07:12 AM