Kolkata Earthquake: ಕೇಂದ್ರ ಸಚಿವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ

Updated on: Feb 27, 2026 | 2:38 PM

ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ಕೋಲ್ಕತ್ತಾ, ಫೆಬ್ರವರಿ 27: ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್  ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.  ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಯಾವುದೇ ಸಾವುನೋವುಗಳು ಅಥವಾ ದೊಡ್ಡ ಹಾನಿಯ ವರದಿಗಳು ಬಂದಿಲ್ಲ. ಅಧಿಕಾರಿಗಳು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮುನ್ನೆಚ್ಚರಿಕೆ ಕ್ರಮವಾಗಿ ಜನರು ಜಾಗರೂಕರಾಗಿರುವಂತೆ ತಿಳಿಸಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪ ಸಂಭವಿಸಿದೆ. ಅದರ ತೀವ್ರತೆ ತುಂಬಾ ಹೆಚ್ಚಾಗಿತ್ತು. ಕಂಪನ ಸಂಭವಿಸಿದಾಗ ಕೇಂದ್ರ ಸಚಿವ ಸುಕಾಂತ ಮಜುಂದಾರ್ ಅವರು ಕಾರ್ಯಕ್ರಮವೊಂದರಲ್ಲಿ ವೇದಿಕೆಯಲ್ಲಿದ್ದರು.

ಬಾಂಗ್ಲಾದೇಶದಲ್ಲೂ ಭೂಕಂಪದ ಅನುಭವವಾಗಿದೆ. ಮಾಧ್ಯಮ ವರದಿಗಳ ಪ್ರಕಾರ, ಫೆಬ್ರವರಿ 27 ರಂದು ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿದೆ. ಇದರ ಕೇಂದ್ರಬಿಂದು ಬಾಂಗ್ಲಾದೇಶದ ಖುಲ್ನಾದಿಂದ ನೈಋತ್ಯಕ್ಕೆ 26 ಕಿಲೋಮೀಟರ್ ದೂರದಲ್ಲಿತ್ತು. ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭೂಕಂಪದ ತೀವ್ರತೆ ಹೆಚ್ಚು ಕಂಡುಬಂದಿದೆ.

ಕಳೆದ ಎರಡು ತಿಂಗಳಲ್ಲಿ ಕೋಲ್ಕತ್ತಾದಲ್ಲಿ ಸಂಭವಿಸಿದ ಮೂರನೇ ಭೂಕಂಪ ಇದಾಗಿದೆ. ಕಾಂಗ್ರೆಸ್ ನಾಯಕ ವಿನಯ್ ಕುಮಾರ್ ಡೋಕಾನಿಯಾ ಅವರು ವೀಡಿಯೊ ಹಂಚಿಕೊಂಡಿದ್ದಾರೆ. ಹಲವು ವರ್ಷಗಳಲ್ಲಿ ಕೋಲ್ಕತ್ತಾವನ್ನು ಅಪ್ಪಳಿಸಿದ ಅತ್ಯಂತ ಶಕ್ತಿಶಾಲಿ ಭೂಕಂಪ ಇದಾಗಿದೆ. ತೀವ್ರತೆ 6ಕ್ಕಿಂತ ಮೇಲಿರುವಂತೆ ಭಾಸವಾಗಿತ್ತು ಎಂದು ಸ್ಥಳೀಯರೊಬ್ಬರು ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More