AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ಪ್ರಭಾಕರ್ ಕೋರೆ ಸೇರಿ ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ

ರಮೇಶ್ ಬಿ. ಜವಳಗೇರಾ
| Edited By: |

Updated on:Jun 24, 2026 | 8:38 AM

Share

Padma Awards 2026: ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ 'ಪದ್ಮ ಪ್ರಶಸ್ತಿ 2026'  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆ

ನವದೆಹಲಿ, (ಜೂನ್ 23): ನವದೆಹಲಿಯ ರಾಷ್ಟ್ರಪತಿ ಭವನದಲ್ಲಿಂದು ರಾಷ್ಟ್ರಪತಿ ದ್ರೌಪದಿ ಮುರ್ಮು (droupadi murmu) ಅವರು ದೇಶದ ವಿವಿಧ ರಂಗಗಳ ಸಾಧಕರಿಗೆ ಪ್ರತಿಷ್ಠಿತ ‘ಪದ್ಮ ಪ್ರಶಸ್ತಿ 2026’  (padma award 2026 ) ಪ್ರದಾನ ಮಾಡಿದರು. ಇನ್ನು ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದ್ದಾರೆ. ಕೆಎಲ್‌ಇ ಸಂಸ್ಥೆಯ ಮೂಲಕ ಲಕ್ಷಾಂತರ ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಶಿಕ್ಷಣ ಮತ್ತು ಆಸ್ಪತ್ರೆಗಳ ಮೂಲಕ ಬಡವರಿಗೆ ಅತ್ಯಾಧುನಿಕ ಉಚಿತ, ಕಡಿಮೆ ವೆಚ್ಚದ ವೈದ್ಯಕೀಯ ಸೇವೆ ನೀಡುತ್ತಿರುವ ಮಹಾದಾನಿ ಡಾ. ಪ್ರಭಾಕರ್ ಕೋರೆ ಹಾಗೂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿರುವ ‘ದೃಷ್ಟಿ’ ವ್ಯವಸ್ಥೆಯನ್ನು ಆವಿಷ್ಕರಿಸಿ, ‘ಅಗ್ನಿ’ ಕ್ಷಿಪಣಿಯ ತಾಂತ್ರಿಕ ದೋಷ ನಿವಾರಿಸಿ ಭಾರತೀಯ ರಕ್ಷಣಾ ವಲಯವನ್ನು ಸ್ವಾವಲಂಬಿಯಾಗಿಸಿದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರು ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದರು.

ಪ್ರೆಸ್ಟೀಜ್ ಸಂಸ್ಥೆಯನ್ನು ಬಿಲಿಯನ್ ಡಾಲರ್ ಉದ್ಯಮವಾಗಿ ಬೆಳೆಸಿ, ಕುಕ್ಕರ್ ಅಪಘಾತ ತಡೆಯುವ ಆವಿಷ್ಕಾರದ ಪೇಟೆಂಟ್ ಹಕ್ಕನ್ನು ದೇಶದ ಜನರ ಜೀವ ರಕ್ಷಣೆಗಾಗಿ ಇಡೀ ಉದ್ಯಮಕ್ಕೆ ಉಚಿತವಾಗಿ ಬಿಟ್ಟುಕೊಟ್ಟ ಉದಾರ ಉದ್ಯಮಿ ಶ್ರೀ ಟಿ.ಟಿ. ಜಗನ್ನಾಥನ್. ಇವರಿಗೆ ಮರಣೋತ್ತರ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸ್ವತಃ ತೀವ್ರ ಕಾಯಿಲೆಯಿಂದ ಬಳಲುತ್ತಿದ್ದರೂ ಅದನ್ನು ಮೆಟ್ಟಿ ನಿಂತು, ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಿಮೋಫಿಲಿಯಾ ರೋಗಿಗಳಿಗೆ ಉಚಿತ ಚಿಕಿತ್ಸೆ ಸಿಗುವಂತೆ ಮಾಡಿದ ಕ್ರಾಂತಿಕಾರಿ ವೈದ್ಯ ಡಾ. ಸುರೇಶ್ ಹನಗವಾಡಿ ಹಾಗೂ ದೂರದರ್ಶನ ಮತ್ತು ಆಕಾಶವಾಣಿಯನ್ನು ಸಂಪೂರ್ಣವಾಗಿ ನವೀಕರಿಸಿ, ಕೋವಿಡ್ ಸಮಯದಲ್ಲಿ ‘ರಾಮಾಯಣ’ ಪ್ರಸಾರದ ಮೂಲಕ ಜಾಗತಿಕ ದಾಖಲೆ ಬರೆದ ಹಾಗೂ ಕೋಟ್ಯಂತರ ವಿದ್ಯಾರ್ಥಿಗಳಿಗೆ ಉಚಿತ ಟಿವಿ ಶಿಕ್ಷಣ ತಲುಪಿಸಿದ ತಂತ್ರಜ್ಞ ಶಶಿ ಶೇಖರ್ ವೇಂಪತಿ ಅವರಿಗೂ ಸಹ ಪದ್ಮಶ್ರೀ ನೀಡಲಾಯ್ತು.

Published on: Jun 23, 2026 11:04 PM

Follow Us