ವೇದಿಕೆಯಲ್ಲಿ ಹನುಮಂತನ ಜೊತೆ ಡ್ಯಾನ್ಸ್ ಮಾಡಿದ ಶಾಸಕ ಪ್ರಭು ಚೌಹಾಣ್

Updated on: Feb 11, 2025 | 5:51 PM

ಬಿಗ್ ಬಾಸ್ ಟ್ರೋಫಿ ವಿನ್ ಆದ ಬಳಿಕ ಹನುಮಂತ ಅವರ ಖ್ಯಾತಿ ದುಪ್ಪಟ್ಟು ಆಗಿದೆ. ಅನೇಕ ಕಾರ್ಯಕ್ರಮಗಳಿಗೆ ಅವರು ಅತಿಥಿಯಾಗಿ ತೆರಳುತ್ತಿದ್ದಾರೆ. ಹನುಮಂತನ ಪ್ರತಿಭೆಗೆ ಅಪಾರ ಸಂಖ್ಯೆಯ ಅಭಿಮಾನಿಗಳು ಫಿದಾ ಆಗಿದ್ದಾರೆ. ರಾಜಕೀಯದ ಮಂದಿಗೂ ಹನುಮಂತ ಫೇವರಿಟ್ ಆಗಿದ್ದಾರೆ. ಅದಕ್ಕೆ ಈ ವಿಡಿಯೋ ಸಾಕ್ಷಿ ಎನ್ನಬಹುದು.

ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬೋಂತಿ ತಾಂಡಾದಲ್ಲಿ ‘ಜಾನಪದ ಸಂಭ್ರಮ’ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್​ 11’ ವಿನ್ನರ್ ಹನುಮಂತ ಅವರು ಭಾಗಿ ಆಗಿದ್ದಾರೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಶಾಸಕ ಪ್ರಭು ಚೌಹಾಣ್ ಕೂಡ ಪಾಲ್ಗೊಂಡಿದ್ದಾರೆ. ಹನುಮಂತನ ಜೊತೆ ವೇದಿಕೆಯಲ್ಲಿ ಪ್ರಭು ಚೌಹಾಣ್ ಡ್ಯಾನ್ಸ್ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More