AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ಕಾಂಗ್ರೆಸ್​ ಅಭ್ಯರ್ಥಿ ಪರ ಪ್ರಚಾರದ ವೇಳೆ ಶಾಸಕ ಪ್ರದೀಪ್​ ಈಶ್ವರ್​ಗೆ ಚಪ್ಪಲಿ ತೋರಿಸಿದ ಬಿಜೆಪಿ ಕಾರ್ಯಕರ್ತರು

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Mar 28, 2026 | 11:03 PM

Share

ದಾವಣಗೆರೆ ಉಪಚುನಾವಣೆ ಮುನ್ನ ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಭಾಷಣದ ಆರೋಪ ಎದುರಿಸಿದ್ದ ಶಾಸಕ ಪ್ರದೀಪ್ ಈಶ್ವರ್, ಸವಾಲು ಸ್ವೀಕರಿಸಿ ಬಿಜೆಪಿ ಕಚೇರಿ ಎದುರು ರ್‍ಯಾಲಿ ನಡೆಸಿದರು. ಈ ವೇಳೆ ಕಾಂಗ್ರೆಸ್ ಧ್ವಜ ಹಾರಿಸಿದಾಗ, ಬಿಜೆಪಿ ಕಾರ್ಯಕರ್ತರು ಪೊರಕೆ, ಚಪ್ಪಲಿ ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ಪ್ರದೀಪ್ ಈಶ್ವರ್ ಬೆಂಬಲಿಸಿ ಕಾಂಗ್ರೆಸ್ ಕಾರ್ಯಕರ್ತರು ಸಹ ಜಮಾಯಿಸಿದ್ದರು.

ದಾವಣಗೆರೆ, ಮಾರ್ಚ್​ 28: ಉಪಚುನಾವಣಾ ಅಖಾಡ ರಂಗೇರಿದೆ. ದಾವಣಗೆರೆ ದಕ್ಷಿಣ ಕ್ಷೇತ್ರ ಕಾವು ಪಡೆದಿದೆ. ಕಾಂಗ್ರೆಸ್​ ಅಭ್ಯರ್ಥಿ ಸಮರ್ಥ್​ ಪರ ಇಂದು ಪ್ರಚಾರಕ್ಕಿಳಿದಿದ್ದ ಶಾಸಕ ಪ್ರದೀಪ್ ಈಶ್ವರ್​​ಗೆ ಪ್ರತಿಭಟನೆ ಬಿಸಿ ತಟ್ಟಿದೆ. ಬಿಜೆಪಿ ಬಗ್ಗೆ ಅವಹೇಳನಕಾರಿ ಪದ ಬಳಕೆಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರ ಕೂಗಿದ್ರು. ಈ ವೇಳೆ ಕೆಲ ಬಿಜೆಪಿ ಕಾರ್ಯಕರ್ತರು ಚಪ್ಪಲಿ, ಪೂರಕೆ ತೋರಿಸಿದ್ದಾರೆ. ದಾವಣಗೆರೆಯಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ಭಾರೀ ಹೈಡ್ರಾಮಾವೇ ನಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬಸವರಾಜ್​ ದೊಡ್ಡಮನಿ, ದಾವಣಗೆರೆ
ಬಸವರಾಜ್​ ದೊಡ್ಡಮನಿ, ದಾವಣಗೆರೆ

ಬಸವರಾಜ್ ದೊಡಮನಿ. 2007ರಿಂದ ಟಿವಿ9 ಕನ್ನಡದ ದಾವಣಗೆರೆ ಜಿಲ್ಲಾ ವರದಿಗಾರರಾಗಿದ್ದಾರೆ. ಹುಟ್ಟಿದ್ದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ತಳಕಟನಾಳದಲ್ಲಿ. ತಂದೆ ಗಂಗಪ್ಪ ದೊಡಮನಿ ಕೃಷಿಕ. ತಾಯಿ ಲಕ್ಕಮ್ಮ ದೊಡಮನಿ. ಇವರದ್ದು ನಾಟಿ ವೈದ್ಯರ ಕುಟುಂಬ. ಜನ ಜಾನುವಾರುಗಳು ರೋಗಕ್ಕೆ ಔಷಧಿ ನೀಡುವುದು ಇವರ ಕುಟುಂಬದ ಕಾಯಕ. 2000 ನಲ್ಲಿ ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದಿಂದ ಸಮೂಹ ಸಂವಹನ‌ ಮತ್ತು ಪತ್ರಿಕೋದ್ಯಮದಲ್ಲಿ ಎಂಎ ಪದವಿ ಪಡೆದಿದ್ದಾರೆ. ವೃತ್ತಿ ಜೀವನ ಆರಂಭವಾಗಿದ್ದು ಕನ್ನಡ ಪ್ರಭ ಪತ್ರಿಕೆಯಿಂದ. ಧಾರವಾಡ ಜಿಲ್ಲಾ ವರದಿಗಾರನಾಗಿ ಸೇವೆ. ಹತ್ತಕ್ಕೂ ಹೆಚ್ಚು ಲೋಕಸಭೆ ಹಾಗೂ ವಿಧಾನ ಸಭೆ ಸದನದ ವರದಿ ಮಾಡಿದ ಅನುಭವ. ಪುಸ್ತಕ ಓದುವುದು, ಜಾನಪದ ಕಲೆ ಉಳಿವಿಗೆ ದಾಖಲೆ ಸಂಗ್ರಹಿಸಿವುದು ಇವರ ಹವ್ಯಾಸ.

Read More