ಪ್ರದೀಪ್ ಆತ್ಮಹತ್ಯೆ ಪ್ರಕರಣ | ಅರವಿಂದ ಲಿಂಬಾವಳಿಯನ್ನು ಬಂಧಿಸಿ ವಿಚಾರಣೆ ನಡೆಸಬೇಕು: ಸಿದ್ದರಾಮಯ್ಯ
ಅರವಿಂದ ಲಿಂಬಾವಳಿ ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಬೆಂಗಳೂರು: ತಾವು ನಂಬಿದ್ದ ಸ್ನೇಹಿತರಿಂದ ಹಣಕಾಸಿನ ವಿಚಾರದಲ್ಲಿ ಮೋಸಹೋಗಿ ಹಣಕಳೆದುಕೊಂಡು ಹತಾಷರಾಗಿ ಆತ್ಮಹತ್ಯೆ ಮಾಡಿಕೊಂಡ ಬೆಂಗಳೂರಿನ ಪ್ರದೀಪ್ (Pradeep) ಅವರು ತಮ್ಮ ಡೆತ್ ನೋಟ್ ನಲ್ಲಿ ಮಾಜಿ ಶಾಸಕ ಮತ್ತು ಮಹದೇವಪುರ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ (Aravind Limbavali) ಅವರ ಹೆಸರನ್ನು ಕೂಡ ಪ್ರಸ್ತಾಪಿಸಿರುವುದರಿಂದ ಅವರನ್ನು ಕೂಡಲೇ ಬಂಧಿಸಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ಮಂಗಳವಾರ ಪ್ರದೀಪ್ ಅವರ ಮನೆಗೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಲಿಂಬಾವಳಿ ವಿರುದ್ಧವೂ ಎಫ್ ಐ ಆರ್ ಅಗಿರುವುದರಿಂದ ಅವರು ಶಾಸಕ ಎಂಬ ಅಂಶವನ್ನು ಬದಿಗೊತ್ತಿ, ಪೊಲೀಸರು ಬಂಧಿಸಿ ವಿಚಾರಣೆ ನಡೆಸಬೇಕು ಮತ್ತು ಪ್ರದೀಪ್ ಅವರ ಪತ್ನಿಗೆ ಹಣ ವಾಪಸ್ಸು ಕೊಡಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ