ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್

Edited By:

Updated on: Oct 02, 2026 | 4:58 PM

ಸೋಷಿಯಲ್ ಮೀಡಿಯಾ ಹಾಗೂ ಯೂಟ್ಯೂಬ್‌ನಲ್ಲಿ ಪೋಸ್ಟ್ ಮಾಡಲಾಗಿರುವ ಮಾಫಿ ಸಾಕ್ಷಿಯ ಎಲ್ಲ ವಿಡಿಯೋಗಳನ್ನು ತಕ್ಷಣವೇ ಡಿಲೀಟ್ ಮಾಡಿಸಬೇಕು. ವಿಡಿಯೋ ಹಂಚಿಕೊಂಡ ಪ್ರತಿಯೊಂದು ಖಾತೆಯ ಬಳಕೆದಾರರನ್ನು ಪತ್ತೆಹಚ್ಚಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು 59ನೇ ಸಿಸಿಹೆಚ್ ನ್ಯಾಯಾಲಯವು ರಿಜಿಸ್ಟ್ರಾರ್‌ಗೆ ನಿರ್ದೇಶನ ನೀಡಿದೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾ ಖಾತೆದಾರರು ಹಾಗೂ ಯೂಟ್ಯೂಬರ್‌ಗಳನ್ನು ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಪ್ರಕರಣದ ಪ್ರಮುಖ ಮಾಫಿ ಸಾಕ್ಷಿ ಪ್ರದೋಷ್ ನೀಡಿದ್ದ ಹೇಳಿಕೆಯ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡು ಜಾಲತಾಣಗಳಲ್ಲಿ ವೈರಲ್ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ನಗರದ 59ನೇ ಸಿಸಿಹೆಚ್ ಕೋರ್ಟ್ ಆದೇಶಿಸಿದೆ. ಪ್ರಕರಣದ ತನಿಖೆ ಹಾಗೂ ನ್ಯಾಯಾಂಗ ಪ್ರಕ್ರಿಯೆಯ ಭಾಗವಾಗಿದ್ದ ಮಾಫಿ ಸಾಕ್ಷಿ ಪ್ರದೋಷ್ ಅವರ ಹೇಳಿಕೆಯ ವಿಡಿಯೋವನ್ನು ಕೆಲವರು ಸ್ಕ್ರೀನ್ ರೆಕಾರ್ಡ್ ಮಾಡಿ ಯೂಟ್ಯೂಬ್ ಹಾಗೂ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ನ್ಯಾಯಾಲಯದ ಗೌಪ್ಯತೆಯನ್ನು ಉಲ್ಲಂಘಿಸಿ, ಈ ವಿಡಿಯೋವನ್ನು ದುರ್ಬಳಕೆ ಮಾಡಿಕೊಂಡಿರುವುದನ್ನು 59ನೇ ಸಿಸಿಹೆಚ್ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಸಾಕ್ಷಿಯ ಹೇಳಿಕೆಯ ವಿಡಿಯೋವನ್ನು ಶೇರ್ ಮಾಡಿದ ಹಾಗೂ ಪೋಸ್ಟ್ ಮಾಡಿದ ಸೋಷಿಯಲ್ ಮೀಡಿಯಾ ಖಾತೆಗಳು ಮತ್ತು ಯೂಟ್ಯೂಬರ್‌‌ಗಳ ವಿರುದ್ಧ ‘ನ್ಯಾಯಾಂಗ ನಿಂದನೆ’ ಪ್ರಕರಣ ದಾಖಲಿಸುವಂತೆ ನ್ಯಾಯಾಲಯವು ಪೊಲೀಸರಿಗೆ ಮತ್ತು ಕೋರ್ಟ್ ರಿಜಿಸ್ಟ್ರಾರ್‌ಗೆ ಸ್ಪಷ್ಟ ನಿರ್ದೇಶನ ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಪ್ರದೀಪ್​ ಚಿಕ್ಕಾಟಿ

ಮೂಲತಃ ಚಾಮರಾಜನಗರ ಜಿಲ್ಲೆಯವನಾಗಿದ್ದು, ಶಾಲಾ ದಿನಗಳಿಂದಲೂ ಮಾಧ್ಯಮಕ್ಕೆ ಸೇರುವ ಹಂಬಲ ಇತ್ತು. ಹೀಗಾಗಿ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ ವ್ಯಾಸಂಗ ಮಾಡಿ ಕೆಲಸಕ್ಕೆ ಸೇರಿದ್ದರು ಅ ಕೆಲಸ ಬಿಟ್ಟು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡಿದೆ. ಬಳಿಕ ಸುಮಾರು 7 ವರ್ಷ‌ದಿಂದ ಮೈಸೂರು, ಹೈದರಾಬಾದ್ ನ ಕೆಲ ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದು, ಪ್ರಸ್ತುತ Tv9 ಕನ್ನಡದ ಕ್ರೈಂ ವರದಿಗಾರನಾಗಿದ್ದೇನೆ. ಓದು, ಬರಹ, ಪ್ರವಾಸ ನನ್ನಿಷ್ಟದ ಹವ್ಯಾಸಗಳು.

Read More