ಮುಸ್ಲಿಮರ ನಮಾಜ್ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಪ್ರಲ್ಹಾದ್ ಜೋಶಿ ವಾಗ್ದಾಳಿ
ಬಾಗಲಕೋಟೆಯಲ್ಲಿ ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ ಪೊಲೀಸರು ಕ್ರಮ ಕೈಗೊಳ್ಳದೆ, ಹಿಂದೂ ಮೆರವಣಿಗೆಗಳಿಗೆ ನಿರ್ಬಂಧ ವಿಧಿಸಿ, ಕೆಲವು ಸಮುದಾಯಕ್ಕೆ ಅನುಮತಿ ನೀಡುತ್ತಿರುವ ದ್ವಂದ್ವ ನೀತಿಯನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ಕಾರ್ಯನಿರ್ವಹಿಸುತ್ತಿದೆ ಎಂದು ದೂರಿದ್ದಾರೆ.
ಕಲಬುರಗಿ, ಫೆಬ್ರವರಿ 21: ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಘಟನೆಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪ್ರತಿಕ್ರಿಯಿಸಿದ್ದು, ಪೊಲೀಸರ ಕಾರ್ಯವೈಖರಿ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಮಸೀದಿಯೊಂದರಲ್ಲಿ 200 ಜನ ಸೇರಿದ್ದರೂ, ಅಲ್ಲಿ ಮಾರಕಾಸ್ತ್ರಗಳು ಸಂಗ್ರಹವಾಗಿವೆ ಎಂಬ ಮಾಧ್ಯಮ ವರದಿಗಳಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದ್ದಾರೆ.
ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ ಜೋಶಿ, ಇದು ಅವರಿಗೆ ಶೋಭೆ ತರುವುದಿಲ್ಲ ಎಂದಿದ್ದಾರೆ. ಹಿಂದೂಗಳ ಮೆರವಣಿಗೆಗಳಿಗೆ ನಿಷೇಧ ಹೇರಿ, ಒಂದು ಸಮುದಾಯಕ್ಕೆ ಅನುಮತಿ ನೀಡುವ ದ್ವಂದ್ವ ನೀತಿಯನ್ನು ಅವರು ತೀವ್ರವಾಗಿ ಖಂಡಿಸಿದ್ದಾರೆ. ಬಾಗಲಕೋಟೆ ಪೊಲೀಸ್ ವರಿಷ್ಠಾಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಐಪಿಎಸ್ ಅಧಿಕಾರಿಯಾದ ನೀವು ‘ಅಯೋಗ್ಯರ’ ಮಾತು ಕೇಳಿ ನಡೆದುಕೊಳ್ಳಬಾರದು ಎಂದು ಎಚ್ಚರಿಸಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಮತಾಂಧ ಇಸ್ಲಾಮಿಕ್ ಶಕ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ದೂರಿದ್ದಾರೆ.
ಭಾಮಾ ಹರೀಶ್ ಪುತ್ರ ನಿಧನ: ಘಟನೆ ವಿವರಿಸಿದ ಜೊತೆಯಲ್ಲಿದ್ದ ಗೆಳೆಯ
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
