ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಭೇಟಿ ನೀಡಿದ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಬಂದಿರುವ ಅವರು ಮೊದಲು, ಲಕ್ಷ್ಮೀ ದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು. ಹೆಚ್ಚಿನ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.
ಪುತ್ತೂರು, ಮಾರ್ಚ್ 1: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಭಾನುವಾರ ಭೇಟಿ ನೀಡಿ ಹಲವು ಧಾರ್ಮಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದರು. ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ ಮುಖ್ಯ ಸಲಹೆಗಾರರಾಗಿರುವ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಮೊದಲಿಗೆ ಪುತ್ತೂರಿನ ಲಕ್ಷ್ಮೀ ದೇವಿ ಬೆಟ್ಟಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಹಾಲಕ್ಷ್ಮೀ ದೇವಿ ಅಮ್ಮನವರ ದರ್ಶನ ಪಡೆದು ಆಶೀರ್ವಾದ ಪಡೆದರು. ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿಸಿ ಸಮುದಾಯದ ಕ್ಷೇಮಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.
ಇದಾದ ಬಳಿಕ ಪುತ್ತೂರಿನಲ್ಲಿ ನಡೆಯಲಿರುವ ಜಿಲ್ಲಾ ಮಟ್ಟದ ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ತೆರಳಿದರು. ಪುತ್ತೂರಿನ ಕೋಟೆಚಾ ಹಾಲ್‌ನಲ್ಲಿ ಆಯೋಜಿಸಲಾದ ಗಾಣಿಗ ಸಂಗಮದಲ್ಲಿ ವಿವಿಧ ಭಾಗಗಳಿಂದ ಸಮುದಾಯದ ಮುಖಂಡರು, ಕಾರ್ಯಕರ್ತರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಕಾರ್ಯಕ್ರಮದಲ್ಲಿ ಸಮುದಾಯದ ಏಕತೆ, ಶೈಕ್ಷಣಿಕ ಅಭಿವೃದ್ಧಿ, ಆರ್ಥಿಕ ಸಬಲೀಕರಣ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಪ್ರಹ್ಲಾದ್ ಮೋದಿ ಅವರ ಆಗಮನದಿಂದ ಕಾರ್ಯಕ್ರಮಕ್ಕೆ ಹೆಚ್ಚುವರಿ ಮೆರುಗು ಬಂದಿದೆ.
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?

