ಪ್ರಜಾಸೇವಾ: ಜನರ ಸಮಸ್ಯೆ ಆಲಿಸಿದ ಸಿಎಂ; ಮಗುವಿನ ಆರೋಗ್ಯ ಸಮಸ್ಯೆ ಹೇಳಿ ಕಣ್ಣೀರಿಟ್ಟ ಮಹಿಳೆ
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆಯ ವೆಬ್‌ಸೈಟ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಚೆಕ್‌ಗಳನ್ನು ವಿತರಿಸಲಾಯಿತು. ವೇದಿಕೆ ಬಳಿಯೇ ಜನರ ಅಹವಾಲುಗಳನ್ನು ಆಲಿಸಿದ ಸಿಎಂ, ಕಣ್ಣೀರಿಡುತ್ತಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿ ಶಾಸಕರಿಗೆ ಪರಿಹಾರ ನೀಡುವಂತೆ ಸೂಚಿಸಿದರು.
ವಿಜಯನಗರ, ಸೆಪ್ಟೆಂಬರ್ 05: ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ‘ಪ್ರಜಾಸೇವೆ ಇಲಾಖೆ’ ವೆಬ್‌ಸೈಟ್ ಅನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳು ಹಾಗೂ ಚೆಕ್‌ಗಳನ್ನು ವಿತರಿಸಿದರು. ಬಳಿಕ ಸಿಎಂ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು. ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುತ್ತಾ, ಮನವಿಗಳನ್ನು ಪಡೆದುಕೊಂಡರು. ಈ ವೇಳೆ, ತಮ್ಮ ಕಷ್ಟ ಹೇಳಿಕೊಳ್ಳಲು ಬಂದಿದ್ದ ಕೆಲ ಮಹಿಳೆಯರು ಡಿಕೆ ಶಿವಕುಮಾರ್ ಎದುರು ಕಣ್ಣೀರಿಟ್ಟರು. ಮಗುವನ್ನು ಎತ್ತಿಕೊಂಡು ಬಂದಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಆಲಿಸಿದ ಸಿಎಂ, ತಕ್ಷಣವೇ ಪರಿಹಾರ ಒದಗಿಸುವಂತೆ ಸ್ಥಳೀಯ ಶಾಸಕ ಶ್ರೀನಿವಾಸ್ಗೆ ಸೂಚನೆ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

