ಪ್ರಜಾಸೇವಾ: ಜನರ ಸಮಸ್ಯೆ ಆಲಿಸಿದ ಸಿಎಂ; ಮಗುವಿನ ಆರೋಗ್ಯ ಸಮಸ್ಯೆ ಹೇಳಿ ಕಣ್ಣೀರಿಟ್ಟ ಮಹಿಳೆ

Updated on: Sep 05, 2026 | 4:40 PM

ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವೆ ಇಲಾಖೆಯ ವೆಬ್‌ಸೈಟ್ ಅನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ಚೆಕ್‌ಗಳನ್ನು ವಿತರಿಸಲಾಯಿತು. ವೇದಿಕೆ ಬಳಿಯೇ ಜನರ ಅಹವಾಲುಗಳನ್ನು ಆಲಿಸಿದ ಸಿಎಂ, ಕಣ್ಣೀರಿಡುತ್ತಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಸಹಾನುಭೂತಿಯಿಂದ ಆಲಿಸಿ ಶಾಸಕರಿಗೆ ಪರಿಹಾರ ನೀಡುವಂತೆ ಸೂಚಿಸಿದರು.

ವಿಜಯನಗರ, ಸೆಪ್ಟೆಂಬರ್​ 05: ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಡಿಕೆ ಶಿವಕುಮಾರ್ ‘ಪ್ರಜಾಸೇವೆ ಇಲಾಖೆ’ ವೆಬ್‌ಸೈಟ್ ಅನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ವಿವಿಧ ಸರಕಾರಿ ಯೋಜನೆಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳು ಹಾಗೂ ಚೆಕ್‌ಗಳನ್ನು ವಿತರಿಸಿದರು. ಬಳಿಕ ಸಿಎಂ ವೇದಿಕೆಯ ಮುಂಭಾಗದಲ್ಲಿ ಕುಳಿತು ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿದರು. ಜನರ ಸಮಸ್ಯೆಗಳನ್ನು ತಾಳ್ಮೆಯಿಂದ ಆಲಿಸುತ್ತಾ, ಮನವಿಗಳನ್ನು ಪಡೆದುಕೊಂಡರು. ಈ ವೇಳೆ, ತಮ್ಮ ಕಷ್ಟ ಹೇಳಿಕೊಳ್ಳಲು ಬಂದಿದ್ದ ಕೆಲ ಮಹಿಳೆಯರು ಡಿಕೆ ಶಿವಕುಮಾರ್ ಎದುರು ಕಣ್ಣೀರಿಟ್ಟರು. ಮಗುವನ್ನು ಎತ್ತಿಕೊಂಡು ಬಂದಿದ್ದ ಮಹಿಳೆಯೊಬ್ಬರ ಸಮಸ್ಯೆಯನ್ನು ಆಲಿಸಿದ ಸಿಎಂ, ತಕ್ಷಣವೇ ಪರಿಹಾರ ಒದಗಿಸುವಂತೆ ಸ್ಥಳೀಯ ಶಾಸಕ ಶ್ರೀನಿವಾಸ್​​ಗೆ ಸೂಚನೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Sep 05, 2026 04:38 PM
Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More