‘ಕೇಕ್ ಹಾಗೂ ಹಾರ ತರಬೇಡಿ’; ಬರ್ತ್​​​ಡೇ ಆಚರಣೆಗೆ ಪ್ರಜ್ವಲ್ ದೇವರಾಜ್ ವಿಶೇಷ ಮನವಿ

Updated on: Jun 24, 2023 | 8:26 AM

ಜುಲೈ 4ರಂದು ಪ್ರಜ್ವಲ್​ ಜನ್ಮದಿನ. ಈ ಬಾರಿಯ ಜನ್ಮದಿನವನ್ನು ಫ್ಯಾನ್ಸ್ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ಈ ವೇಳೆ ಅವರು ಅಭಿಮಾನಿಗಳ ಬಳಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ.

ನೆಚ್ಚಿನ ನಟನ ಬರ್ತ್​​ಡೇನ ಆಚರಿಸಬೇಕು ಎನ್ನುವ ಕನಸು ಅಭಿಮಾನಿಗಳಿಗೆ ಇರುತ್ತದೆ. ಈಗ ಇಂಥ ಅವಕಾಶವನ್ನು ಮಾಡಿಕೊಡುತ್ತಿದ್ದಾರೆ ಪ್ರಜ್ವಲ್ ದೇವರಾಜ್ (Prajwal Devaraj). ಅವರು ಹಲವು ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆಗಿದ್ದಾರೆ. ಜುಲೈ 4ರಂದು ಅವರ ಜನ್ಮದಿನ. ಈ ಬಾರಿಯ ಜನ್ಮದಿನವನ್ನು ಫ್ಯಾನ್ಸ್ ಜೊತೆ ಆಚರಿಸಿಕೊಳ್ಳುತ್ತಿದ್ದಾರೆ. ‘ಕಳೆದ ಐದು ವರ್ಷಗಳಿಂದ ಹುಟ್ಟುಹಬ್ಬದ ದಿನ ನಿಮ್ಮನ್ನು ಭೇಟಿ ಆಗೋಕೆ ಆಗಿಲ್ಲ. ಈ ವರ್ಷ ಜುಲೈ 4ರಂದು ನಿಮ್ಮನ್ನು ಭೇಟಿ ಮಾಡುತ್ತಿದ್ದೇನೆ. ಕೇಕ್, ಹಾರ ತರಬೇಡಿ. ಆ ಹಣವನ್ನು ಒಳ್ಳೆಯ ಕೆಲಸಕ್ಕೆ ಬಳಸಿ’ ಎಂದು ಪ್ರಜ್ವಲ್ ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More