Prajwal Revanna Video: ಪ್ರಜ್ವಲ್ ರೇವಣ್ಣನ ಹೊಸ ವಿಡಿಯೋ ರಿಲೀಸ್: ಮಹತ್ವದ ವಿಚಾರ ಹಂಚಿಕೊಂಡ ಸಂಸದ
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣ: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಕೂಡಲೇ ಕರ್ನಾಟಕಕ್ಕೆ ಬಂದು, ನೆಲದ ಕಾನೂನು ಗೌರವಿಸಬೇಕು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಎಚ್ಚರಿಕೆ ಪತ್ರ ಬರೆದಿದ್ದರು. ಅಲ್ಲದೇ ವಿದೇಶಾಂಗ ಸಚಿವಾಲಯವೂ ಸಹ ಪಾಸ್ಪಾರ್ಟ್ ರದ್ದುಗೊಳಿಸುವ ಪ್ರಕ್ರಿಯಿಯೆ ಶುರು ಮಾಡಿದೆ. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಹೊಸ ವಿಡಿಯೋ ಬಿಡುಗಡೆ ಮಾಡಿದ್ದು, ವಿಡಿಯೋನಲ್ಲಿ ಕೇಸ್ಗೆ ಸಂಬಂಧಿಸಿದಂತೆ ಮಹತ್ವದ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರು, (ಮೇ 27): ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ (Prajwal Revanna Case) ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ಅವರ ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್‌ಅನ್ನು ರದ್ದುಗೊಳಿಸಬೇಕು ಎಂದು ಸಿದ್ದರಾಮಯ್ಯ ಅವರು ಎರಡು ಬಾರಿ ಪತ್ರ ಬರೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡಿಪ್ಲೊಮ್ಯಾಟಿಕ್ ಪಾಸ್‌ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸಿದೆ. ಇನ್ನು, ಇದರ ಭಾಗವಾಗಿಯೇ ಕೇಂದ್ರ ಸರ್ಕಾರವು ಪ್ರತಿಕ್ರಿಯೆ ಕೋರಿ ಪ್ರಜ್ವಲ್ ರೇವಣ್ಣಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದೆ. ಶೋಕಾಸ್ ನೋಟಿಸ್‌ಗೂ ಉತ್ತರ ನೀಡದಿದ್ದರೆ, ಕೇಂದ್ರ ಸರ್ಕಾರವು ಪಾಸ್‌ಪೋರ್ಟ್ ರದ್ದುಗೊಳಿಸಲಿದೆ ಎಂದು ಹೇಳಲಾಗುತ್ತಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಅವರು ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳು ಬಳಿಕ ವಿಡಿಯೋ ಮೂಲಕ ಬಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ. ಅಲ್ಲದೇ ವಿದೇಶಕ್ಕೆ ಹೋಗಿರುವ ಬಗ್ಗೆಯೂ ಸ್ಪಷ್ಟನೆ ನಿಡಿದ್ದಾರೆ. ಹಾಗಾದ್ರೆ, ಪ್ರಜ್ವಲ್ ರೇವಣ್ಣ ಅವರು ವಿಡಿಯೋನಲ್ಲಿ ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ