ಪ್ರಜ್ವಲ್ ರೇವಣ್ಣ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸೆನ್ಸಿಟಿವ್ ಆಗಿದೆ: ಪ್ರಲ್ಹಾದ್ ಜೋಶಿ

Updated on: Apr 30, 2024 | 10:29 AM

ಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕೇಂದರ ಸಚಿವ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ (Pralhad Joshi) ನಾಳೆ ಅಮಿತ್ ಶಾ (Amit Shah) ನಗರಕ್ಕೆ ಬಂದು ತಮ್ಮ ಪರ ಪ್ರಚಾರ ಮಾಡಲಿದ್ದಾರೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿಯವರ (PM Narendra Modi) ನಂತರ ಶಾ ಭಾರತದ ಅತ್ಯಂತ ಜನಪ್ರಿಯ ನಾಯಕರು ಮತ್ತು ಪಕ್ಷವನ್ನು ಕಟ್ಟಿ ಬೆಳೆಸುವಲ್ಲಿ ಮಹತ್ತರ ಪಾತ್ರ ನಿರ್ವಹಿಸಿದ್ದಾರೆ ಎಂದು ಹೇಳಿದ ಜೋಶಿ ಅವರ ಆಗಮನಕ್ಕಾಗಿ ಕ್ಷೇತ್ರದ ಕಾರ್ಯಕರ್ತರು ಮತ್ತು ಜನ ಕಾತುರದಿಂದ ಕಾಯುತ್ತಿದ್ದಾರೆ ಎಂದರು. ಪ್ರಜ್ವಲ್ ರೇವಣ್ಣನ ಪ್ರಕರಣ ಬಿಜೆಪಿ ಮೇಲೆ ಯಾವುದೇ ವ್ಯತಿರಿಕ್ತ ಪರಿಣಾಮ ಬೀರಲ್ಲ, ಜೆಡಿಎಸ್ ಒಂದು ಸ್ವತಂತ್ರ ಪಾರ್ಟಿ, ಪ್ರಜ್ವಲ್ ಮಾಜಿ ಪ್ರಧಾನಿಯೊಬ್ಬರ ಮೊಮ್ಮಗನಾಗಿರುವುದರಿಂದ ಪ್ರಕರಣ ಹೆಚ್ಚು ಸಂವೇದನಾಶೀಲವಾಗಿದೆ ಎಂದು ಜೋಶಿ ಹೇಳಿದರು. ಪ್ರಕರಣದ ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆ ಅಗೇ ಆಗುತ್ತದೆ, ಖುದ್ದು ಕುಮಾರಾಸ್ವಾಮಿಯವರೇ, ಉಪ್ಪು ತಿಂದವನು ನೀರು ಕುಡಿಯಲೇ ಬೇಕು ಅಂತ ಹೇಳಿದ್ದಾರೆ. ಪ್ರಜ್ವಲ್ ವಿದೇಶಕ್ಕೆ ಹಾರಿ ಹೋಗಿದ್ದಕ್ಕೆ ಕಾಂಗ್ರೆಸ್ ನಾಯಕರು ಬಿಜೆಪಿ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ನೇಹಾ ಮತಾಂತರಕ್ಕೆ ಯತ್ನಿಸಿದ್ದ ಫಯಾಜ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಆರೋಪ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More