ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ: 196 ರಾಷ್ಟ್ರಗಳಿಗೆ ಮಾಹಿತಿ ರವಾನಿಸಿದ ಇಂಟರ್ ಪೋಲ್
ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಬಗ್ಗೆ ಎಸ್ಐಟಿಗೆ ಇಂಟರ್ಪೋಲ್ ಮಾಹಿತಿ ನೀಡಿದೆ.
ಬೆಂಗಳೂರು, ಮೇ 07: ವಿದೇಶಕ್ಕೆ ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಬಂಧನಕ್ಕೆ ಎಸ್ಐಟಿ ನಿರಂತರ ಪ್ರಯತ್ನ ನಡೆಸುತ್ತಿದೆ. ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಲಾಗಿದೆ. ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಬ್ಲೂ ಕಾರ್ನರ್ ನೋಟಿಸ್ (Blue Corner Notice) ಕೂಡ ಜಾರಿ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 196 ರಾಷ್ಟ್ರಗಳಿಗೆ ಇಂಟರ್ ಪೋಲ್ ಮಾಹಿತಿ ರವಾನಿಸಿದೆ. ಆ ಮೂಲಕ ಪ್ರಜ್ವಲ್ ರೇವಣ್ಣಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಈ ಬಗ್ಗೆ ಎಸ್ಐಟಿಗೆ ಇಂಟರ್ಪೋಲ್ ಮಾಹಿತಿ ನೀಡಿದೆ. ಪ್ರಜ್ವಲ್ ರೇವಣ್ಣ ಬಗ್ಗೆ ಮಾಹಿತಿ ಸಿಕ್ಕರೆ ಹಂಚಿಕೊಳ್ಳುತ್ತೇವೆ. ಏರ್‌ಪೋರ್ಟ್, ಬಂದರು, ಗಡಿಯಲ್ಲಿ ಕಾಣಿಸಿಕೊಂಡರೆ ಮಾಹಿತಿ ನೀಡುವುದಾಗಿ ಎಸ್ಐಟಿಗೆ ಇಂಟರ್ಪೋಲ್ ಹೇಳಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos

