ಪ್ರಜ್ವಲ್ ರೇವಣ್ಣ ಪ್ರಕರಣ: ಸಿದ್ದರಾಮಯ್ಯ, ರೇವಣ್ಣ ಮಧ್ಯೆ ಒಪ್ಪಂದ; ಪ್ರಲ್ಹಾದ್ ಜೋಶಿ ಗಂಭೀರ ಆರೋಪ
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಳ್ಳಲು ಕೇಂದ್ರ ಸರ್ಕಾರ ಕಾರಣ ಎಂಬ ಕಾಂಗ್ರೆಸ್ ನಾಯಕರ ಆರೋಪ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯನ್ನು ಕೆರಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್ಡಿ ರೇವಣ್ಣ ಮಧ್ಯೆ ಒಪ್ಪಂದ ಏರ್ಪಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.
ಹುಬ್ಬಳ್ಳಿ, ಏಪ್ರಿಲ್ 30: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಶಾಸಕ ಹೆಚ್ಡಿ ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಆರೋಪ ಕೇಳಿಬಂದಕೂಡಲೇ ಯಾಕೆ ಪ್ರಜ್ವಲ್ ವಿರುದ್ಧ ರಾಜ್ಯ ಸರ್ಕಾರ ಎಫ್ಐಆರ್ ದಾಖಲಿಸಲಿಲ್ಲ? ಪ್ರಜ್ವಲ್ ರೇವಣ್ಣರನ್ನು ಓಡಿ ಹೋಗುವುದಕ್ಕೆ ಯಾಕೆ ಬಿಟ್ಟರು? ರಾಜ್ಯದ ಪೊಲೀಸರು ಪ್ರಜ್ವಲ್ರನ್ನು ಬಂಧಿಸಬೇಕಿತ್ತು. ಇಲ್ಲಿ ದೂರು ದಾಖಲಾದರೆ ಕೇಂದ್ರ ಸರ್ಕಾರಕ್ಕೆ ಏನಾದರೂ ಕನಸು ಬೀಳುತ್ತದೆಯೇ ಎಂದು ಜೋಶಿ ಪ್ರಶ್ನಿಸಿದರು.
ಪ್ರಜ್ವಲ್ ಓಡಿಹೋಗಲು ಕೇಂದ್ರ ಸರ್ಕಾರದ ವಿಳಂಬ ನೀತಿ ಕಾರಣ ಎಂಬ ಕಾಂಗ್ರೆಸ್ನ ಕೆಲವು ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ ಅವರು, ರಾಜ್ಯ ಸರ್ಕಾರ ಏಕೆ ಬೇಗ ಎಫ್ಐಆರ್ ದಾಖಲಿಸಲಿಲ್ಲ? ಎಫ್ಐಆರ್ ದಾಖಲಿಸುವ ಮೊದಲೇ ಯಾಕೆ ಆರೋಪಿಯನ್ನು ಬಂಧಿಸಲಿಲ್ಲ? ನಾವು ಪ್ರಜ್ವಲ್ರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮಗೆ ಪರಿಣಾಮವಾಗಲ್ಲ ಎಂದು ಹೇಳಿದರು.
ಇದನ್ನೂ ಓದಿ: ವಿಡಿಯೋ ಕೇಸ್: ಪ್ರಜ್ವಲ್ ರೇವಣ್ಣ ತಪ್ಪು ಸಾಬೀತಾದ್ರೆ ಏನು ಶಿಕ್ಷೆ? ಕಾನೂನಿನಲ್ಲಿರುವ ಅವಕಾಶಗಳೇನು?
ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು.
ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published on: Apr 30, 2024 10:03 AM
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
