ಪ್ರಜ್ವಲ್ ರೇವಣ್ಣ ಪ್ರಕರಣ: ಸಿದ್ದರಾಮಯ್ಯ, ರೇವಣ್ಣ ಮಧ್ಯೆ ಒಪ್ಪಂದ; ಪ್ರಲ್ಹಾದ್ ಜೋಶಿ ಗಂಭೀರ ಆರೋಪ

Edited By:

Updated on: Apr 30, 2024 | 10:11 AM

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಳ್ಳಲು ಕೇಂದ್ರ ಸರ್ಕಾರ ಕಾರಣ ಎಂಬ ಕಾಂಗ್ರೆಸ್ ನಾಯಕರ ಆರೋಪ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯನ್ನು ಕೆರಳಿಸಿದೆ. ಈ ವಿಚಾರವಾಗಿ ಕಾಂಗ್ರೆಸ್ ಆರೋಪಗಳಿಗೆ ತಿರುಗೇಟು ನೀಡಿದ ಅವರು, ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್​ಡಿ ರೇವಣ್ಣ ಮಧ್ಯೆ ಒಪ್ಪಂದ ಏರ್ಪಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿ, ಏಪ್ರಿಲ್ 30: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣದ ತನಿಖೆಗೆ ಸಂಬಂಧಿಸಿ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಶಾಸಕ ಹೆಚ್​ಡಿ ರೇವಣ್ಣ ಹಾಗೂ ಸಿಎಂ ಸಿದ್ದರಾಮಯ್ಯ ಜತೆ ಒಪ್ಪಂದವಾಗಿದೆ ಎಂಬುದಾಗಿ ಜನರು ಮಾತನಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ. ಆರೋಪ ಕೇಳಿಬಂದಕೂಡಲೇ ಯಾಕೆ ಪ್ರಜ್ವಲ್ ವಿರುದ್ಧ ರಾಜ್ಯ ಸರ್ಕಾರ ಎಫ್​ಐಆರ್ ದಾಖಲಿಸಲಿಲ್ಲ? ಪ್ರಜ್ವಲ್​​ ರೇವಣ್ಣರನ್ನು ಓಡಿ ಹೋಗುವುದಕ್ಕೆ ಯಾಕೆ ಬಿಟ್ಟರು? ರಾಜ್ಯದ ಪೊಲೀಸರು ಪ್ರಜ್ವಲ್​ರನ್ನು ಬಂಧಿಸಬೇಕಿತ್ತು. ಇಲ್ಲಿ ದೂರು ದಾಖಲಾದರೆ ಕೇಂದ್ರ ಸರ್ಕಾರಕ್ಕೆ ಏನಾದರೂ ಕನಸು ಬೀಳುತ್ತದೆಯೇ ಎಂದು ಜೋಶಿ ಪ್ರಶ್ನಿಸಿದರು.

ಪ್ರಜ್ವಲ್ ಓಡಿಹೋಗಲು ಕೇಂದ್ರ ಸರ್ಕಾರದ ವಿಳಂಬ ನೀತಿ ಕಾರಣ ಎಂಬ ಕಾಂಗ್ರೆಸ್​​ನ ಕೆಲವು ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿದ ಅವರು, ರಾಜ್ಯ ಸರ್ಕಾರ ಏಕೆ ಬೇಗ ಎಫ್​ಐಆರ್​ ದಾಖಲಿಸಲಿಲ್ಲ? ಎಫ್​ಐಆರ್ ದಾಖಲಿಸುವ ಮೊದಲೇ ಯಾಕೆ ಆರೋಪಿಯನ್ನು ಬಂಧಿಸಲಿಲ್ಲ? ನಾವು ಪ್ರಜ್ವಲ್​ರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಿಂದ ನಮಗೆ ಪರಿಣಾಮವಾಗಲ್ಲ ಎಂದು ಹೇಳಿದರು.

ಇದನ್ನೂ ಓದಿ: ವಿಡಿಯೋ ಕೇಸ್‌: ಪ್ರಜ್ವಲ್ ರೇವಣ್ಣ ತಪ್ಪು ಸಾಬೀತಾದ್ರೆ ಏನು ಶಿಕ್ಷೆ? ಕಾನೂನಿನಲ್ಲಿರುವ ಅವಕಾಶಗಳೇನು?

ತಪ್ಪು ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಬೇಕು ಎಂದು ಜೋಶಿ ಆಗ್ರಹಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published on: Apr 30, 2024 10:03 AM
Follow Us
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More