ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ-ಜೆಡಿಎಸ್ ಮೈತ್ರಿ ಅವಕಾಶಗಳ ಮೇಲೆ ಪರಿಣಾಮ ಬೀರದು: ಸಾರಾ ಮಹೇಶ್

ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ-ಜೆಡಿಎಸ್ ಮೈತ್ರಿ ಅವಕಾಶಗಳ ಮೇಲೆ ಪರಿಣಾಮ ಬೀರದು: ಸಾರಾ ಮಹೇಶ್

ಅರುಣ್​ ಕುಮಾರ್​ ಬೆಳ್ಳಿ
|

Updated on: May 28, 2024 | 5:12 PM

ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ-ಜೆಡಿಎಸ್ ಮೈತ್ರಿಯ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ತಮ್ಮ ಮೈತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸೀಟುಗಳನ್ನು ಗೆಲ್ಲಲಿದೆ, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಲಿಷ್ಠವಾಗಲಿದೆ ಎಂದು ಮಹೇಶ್ ಹೇಳಿದರು.

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಜೆಡಿಎಸ್ ಮಾಜಿ ಶಾಸಕ ಸಾರಾ ಮಹೇಶ್ (Sa Ra Mahesh), ನಮ್ಮ ರಾಜ್ಯದ ಜನತೆ ಪ್ರಬುದ್ಧರು, ಯಾವುದು ಸರಿ, ತಪ್ಪು ಯಾವುದು ಅಂತ ವಿವೇಚಿಸುತ್ತಾರೆ. ಪ್ರಜ್ವಲ್ ರೇವಣ್ಣ (Prajwal Revanna) ಮಾಡಿದ್ದು ತಪ್ಪು ಅಂತ ಎಲ್ಲರಿಗೂ ಗೊತ್ತಿದೆ, ಆದರೆ ಹೆಚ್ ಡಿ ರೇವಣ್ಣ (HD Revanna) ಅವರನ್ನು ಈ ಪ್ರಕರಣದಲ್ಲಿ ಸುಖಾಸುಮ್ಮನೆ ಎಳೆತಂದು ಯಾವುದೋ ದೊಡ್ಡ ಸಾಧನೆ ಮಾಡಿದ ಹಾಗೆ ಸರ್ಕಾರ ಬೀಗುತ್ತಿದೆ ಎಂದರು. ಒಬ್ಬ ವ್ಯಕ್ತಿಯ ದೆಸೆಯಿಂದ ಇಡೀ ಪಕ್ಷವನ್ನು ದೂರುವುದು ತಪ್ಪು, ಎಲ್ಲ ಪಕ್ಷಗಳಲ್ಲಿ ಒಳ್ಳೆಯವರಿರುತ್ತಾರೆ, ಕೆಟ್ಟವರಿರುತ್ತಾರೆ, ಪ್ರಜ್ವಲ್ ಒಬ್ಬನ ಕಾರಣಕ್ಕೆ ಪೂರ್ತಿ ಜೆಡಿಎಸ್ ಪಕ್ಷವನ್ನು ಕಟಕಟೆಯಲ್ಲಿ ನಿಲ್ಲಿಸುವುದು ಸರಿಯಲ್ಲ ಎಂದು ಮಹೇಶ್ ಹೇಳಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಬಿಜೆಪಿ-ಜೆಡಿಎಸ್ ಮೈತ್ರಿಯ ಅವಕಾಶಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, ತಮ್ಮ ಮೈತ್ರಿ ಹೆಚ್ಚಿನ ಸಂಖ್ಯೆಯಲ್ಲಿ ಸೀಟುಗಳನ್ನು ಗೆಲ್ಲಲಿದೆ, ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗಲಿದ್ದಾರೆ ಮತ್ತು ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಬಲಿಷ್ಠವಾಗಲಿದೆ ಎಂದು ಮಹೇಶ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ರೇವಣ್ಣರನ್ನು ಬಂಧಿಸಿದ್ದು ಒಂದು ರಾಜಕೀಯ ಪಿತೂರಿ ಅಂತ ರಾಜ್ಯದ ಜನತೆಗೆ ಗೊತ್ತಾಗಿದೆ: ಸಾರಾ ಮಹೇಶ್