‘ರೇವಣ್ಣನ ನಡವಳಿಕೆ ಸರಿಯಿಲ್ಲ ಇಂಗ್ಲೆಂಡ್ನಲ್ಲೂ ಒಂದ್ಸಲ ಸಿಕ್ಕಿಬಿದ್ದಿದ್ರು’: ಎಲ್.ಆರ್ ಶಿವರಾಮೇಗೌಡ
"ರೇವಣ್ಣ ಅಂತಹ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ, ನಾನು ರೇವಣ್ಣ ಇಂಗ್ಲೆಂಡ್ಗೆ ಹೋಗಿದ್ದಾಗ ಅಲ್ಲಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ರು. ಹಾಸನದಲ್ಲಿ ನಡೆದಂತಹ ಘಟನೆಯೇ ಅಂದು ಇಂಗ್ಲೆಂಡ್ನಲ್ಲೂ ನಡೆದಿತ್ತು" ಎಂದು ಪೆನ್ ಡ್ರೈ ಪ್ರಕರಣದ ಸುದ್ದಿಗೋಷ್ಠಿಯಲ್ಲಿ ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ದೇಶಾದ್ಯಂತ ಭಾರೀ ಸುದ್ದಿಯಲ್ಲಿದೆ. ಈ ಸಂಬಂಧ ಎಸ್ಐಟಿ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿದ್ದು, ಸಂತ್ರಸ್ತೆಯರಿಂದ ಮಾಹಿತಿ ಕಲೆಹಾಕುವ ಕಾರ್ಯ ನಡೆಸುತ್ತಿದ್ದಾರೆ. ಇದೀಗ ಜೆಡಿಎಸ್ನ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಸ್ಪೋಟಕ ಹೇಳಿಕೆ ನೀಡಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಪೆನ್ ಡ್ರೈ ಪ್ರಕರಣದ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಲ್.ಆರ್ ಶಿವರಾಮೇಗೌಡ “ಮಗ ಇಂತಹ ಹೀನಾ ಕೃತ್ಯ ನಡೆಸುವಾಗ ಅವರ ಅಪ್ಪ ಅಮ್ಮ ಕತ್ತೆ ಕಾಯ್ತಿದ್ರಾ?” ಎಂದು ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ. ಇದಲ್ಲದೇ ” ರೇವಣ್ಣ ಅಂತಹ ಒಳ್ಳೆಯ ನಡವಳಿಕೆ ವ್ಯಕ್ತಿಯಲ್ಲ, ನಾನು ರೇವಣ್ಣ ಇಂಗ್ಲೆಂಡ್ಗೆ ಹೋಗಿದ್ದಾಗ ಅಲ್ಲಿ ರೇವಣ್ಣ ಸಿಕ್ಕಿಹಾಕಿಕೊಂಡಿದ್ರು. ಹಾಸನದಲ್ಲಿ ನಡೆದಂತಹ ಘಟನೆಯೇ ಅಂದು ಇಂಗ್ಲೆಂಡ್ನಲ್ಲೂ ನಡೆದಿತ್ತು” ಎಂದು ಶಿವರಾಮೇಗೌಡ ಹೇಳಿದ್ದಾರೆ. ಸದ್ಯ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಅವರು ಜಾಮೀನು(Bail) ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 04, 2024 11:50 AM
ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಬ್ಯಾಟ್ ಬೀಸಿದ ಸಚಿವ ಗಜೇಂದ್ರ ಸಿಂಗ್ ಶೇಖಾವತ್
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ

