ಅತ್ಯಾಚಾರ ಪ್ರಕರಣದಲ್ಲಿ ದೋಷಿ: ಕಣ್ಣೀರು ಹಾಕುತ್ತಾ ಕೋರ್ಟ್ನಿಂದ ನಿರ್ಗಮಿಸಿದ ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ದೊಡ್ಡ ಆಘಾತ ನೀಡಿದೆ. ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿದ್ದು, ಇದನ್ನು ಕೇಳುತ್ತಿದ್ದಂತೆಯೇ ಅವರು ಕುಸಿದುಹೋದರು. ಕಣ್ಣೀರು ಹಾಕುತ್ತಾ ಪೊಲೀಸರ ಜತೆ ಕೋರ್ಟ್ ಹಾಲ್ನಿಂದ ನಿರ್ಗಮಿಸಿದರು.
ಬೆಂಗಳೂರು, ಆಗಸ್ಟ್ 1: ಜೆಡಿಎಸ್ನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ. ಹಲವು ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ, 2024ರ ಮೇ 31 ರಿಂದ ಬಂಧನದಲ್ಲಿದ್ದಾರೆ. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ಅವರನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ತೀರ್ಪು ಪ್ರಕಟಿಸುತ್ತಿದ್ದಂತೆಯೇ ಪ್ರಜ್ವಲ್ ರೇವಣ್ಣ ಕಣ್ಣೀರು ಹಾಕಿದರು. ನಂತರ ಕೋರ್ಟ್ ಕೊಠಡಿಯ ಹೊರಭಾಗದಲ್ಲಿ ಕುಳಿತುಕೊಂಡು ದುಃಖಿಸಿದರು. ಆ ಬಳಿಕ ಕಣ್ಣೀರು ಒರೆಸುತ್ತಾ ಅಲ್ಲಿಂದ ತೆರಳಿದರು.
ಇದನ್ನೂ ಓದಿ: ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

