ಪ್ರಜ್ವಲ್ ರೇವಣ್ಣ ಹಾಸಿಗೆ, ದಿಂಬನ್ನೇ ಕೊಂಡೊಯ್ದ ಎಸ್ಐಟಿ!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿದೆ. ಈ ಸಂಬಂಧ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ದಾಖಲಾಗಿದ್ದು, ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇನ್ನು ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದು, ಮೇ 31 ರಂದು ವಿಚಾರಣೆಗೆ ಹಾಜರಾಗುವುದಾಗಿ ಹೇಳಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದೆ. ಎಸ್ಐಟಿ ಮತ್ತು ಎಫ್ಎಸ್ಎಲ್ ಅಧಿಕಾರಿಗಳು ಮಂಗಳವಾರ (ಮೇ 28)ರ ರಾತ್ರಿ ಹಾಸನ ನಗರದ ಆರ್.ಸಿ.ರಸ್ತೆಯಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಮನೆಯಲ್ಲಿ ಪರಿಶೀಲನೆ ಆರಂಭಿಸಿ, ಇಂದು (ಮೇ 29) ನಸುಕಿನ ಜಾವ 4ರವರೆಗೆ ಎಸ್ಐಟಿ ಮತ್ತು ಎಫ್ಎಸ್ಎಲ್ ಅಧಿಕಾರಿಗಳು ಪರಿಶೀಲನೆ ಮಾಡಿದರು.
ಸತತ 10 ಗಂಟೆಗಳ ಕಾಲ ಪರಿಶೀಲನೆ ನಡೆಸಿದ ಎಸ್ಐಟಿ, ಎಫ್ಎಸ್ಎಲ್ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಮನೆಯಲ್ಲಿ ವಿವಿಧ ಕಡೆ ಬೆರಳಚ್ಚು ಮಾದರಿಗಳನ್ನು ಸಂಗ್ರಹಿಸಿದ್ದಾರೆ. ಪ್ರಜ್ವಲ್ ರೇವಣ್ಣ ಮಲಗುವ ಕೊಠಡಿಯಲ್ಲಿನ ಹಾಸಿಗೆ, ದಿಂಬು, ಹೊದಿಕೆ ಸೇರಿದಂತೆ ಇತರೆ ವಸ್ತುಗಳನ್ನು ಎಸ್ಐಟಿ, ಎಫ್ಎಸ್ಎಲ್ ತಂಡ ತೆಗೆದುಕೊಂಡು ಹೋಗಿದೆ.
ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಕೇಸ್: ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರಂಟ್
ಇನ್ನು ಪ್ರಕರಣ ಸಂಬಂಧ ವಿಚಾರಣೆಗೆ ಮೇ 31ರಂದು ಹಾಜರಾಗುವುದಾಗಿ ಸಂಸದ ಪ್ರಜ್ವಲ್ ರೇವಣ್ಣ ನಿಗೂಡ ಸ್ಥಳದಲ್ಲಿ ಕೂತು ವಿಡಿಯೋ ಮೂಲಕ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಪೆಟ್ರೋಲ್ ಬಂಕ್ನಲ್ಲಿ ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್ಗೇ ಬೆಂ
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್ನೋಟ್ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ

