HD Kumaraswamy: ಹೆಚ್​ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

HD Kumaraswamy: ಹೆಚ್​ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿಯ ನೇರ ಪ್ರಸಾರ

Ganapathi Sharma
|

Updated on: May 07, 2024 | 11:43 AM

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಎಸ್​ಐಟಿ ತನಿಖೆ ಪ್ರಗತಿಯಲ್ಲಿದೆ. ಇದಕ್ಕೆ ಸಂಬಂಧಿಸಿದ ಇನ್ನೊಂದು ಕಿಡ್ನಾಪ್ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ ಎಸ್​ಐಟಿ ವಶದಲ್ಲಿದ್ದಾರೆ. ಮತ್ತೊಂದೆಡೆ, ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ನಡೆಯುತ್ತಿದೆ. ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಮೇ 7: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣ ದಿನೇದಿನೆ ತಿರುವು ಪಡೆದುಕೊಳ್ಳುತ್ತಿದೆ. ವಿಡಿಯೋ ಲೀಕ್ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್ ಕೈವಾಡ ಇರುವುದಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಈಗಾಗಲೇ ಆರೋಪ ಮಾಡಿದ್ದಾರೆ. ಈ ಮಧ್ಯೆ, ಹಾಸನದ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಮೇಲೆ ಕಾಂಗ್ರೆಸ್ ಆರೋಪ ಮಾಡಿತ್ತು. ಇದಕ್ಕೆ ತಿರುಗೇಟು ನೀಡಿದ್ದ ದೇವರಾಜೇಗೌಡ, ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡ ಇದೆ ಎಂದು ನೇರ ಆರೋಪ ಮಾಡಿದ್ದಾರೆ. ಜತೆಗೆ, ಪ್ರಕರಣದ ತನಿಖೆಗೆ ರಚಿಸಲಾಗಿರುವ ಎಸ್​ಐಟಿ ಸಹ ಡಿಕೆ ಶಿವಕುಮಾರ್ ನಿಯಂತ್ರಣದಲ್ಲಿದೆ ಎಂದು ಆರೋಪಿಸಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೆಚ್​ಡಿ ಕುಮಾರಸ್ವಾಮಿ ಮಂಗಳವಾರ ತುರ್ತು ಸುದ್ದಿಗೋಷ್ಠಿ ಕರೆದಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಸುದ್ದಿಗೋಷ್ಠಿ ನಡೆಯುತ್ತಿದೆ. ಪ್ರಸ್ತುತ ರಾಜಕೀಯ ಮತ್ತು ವಿಡಿಯೋ ಪ್ರಕರಣ ಕುರಿತು ಸುದ್ದಿಗೋಷ್ಠಿಯಲ್ಲಿ ಕುಮಾರಸ್ವಾಮಿ ಪ್ರಸ್ತಾಪಿಸುತ್ತಿದ್ದಾರೆ. ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿ ನೀಡಲಾಗಿದೆ.

ಇದನ್ನೂ ಓದಿ: ಶೀಘ್ರದಲ್ಲೇ ಮತ್ತೊಂದು ಸಿಡಿ, ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

ಈ ಮಧ್ಯೆ, ವಿಡಿಯೋ ಪ್ರಕರಣದಲ್ಲಿ ಡಿಕೆ ಶಿವಕುಮಾರ್ ಕೈವಾಡವಿದೆ ಎಂದು ಬಿಜೆಪಿಯ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಹ ಆರೋಪಿಸಿದ್ದಾರೆ. ಮತ್ತೊಂದೆಡೆ, ಪ್ರಜ್ವಲ್​​ ವಿಡಿಯೋ ಕೇಸ್​ನಲ್ಲಿ ಡಿಸಿಎಂ ಡಿಕೆ ಶಿಕುಮಾರ್ ಕೈವಾಡವಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಜೆಡಿಎಸ್​​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬೆಂಗಳೂರಿನ ಜೆಡಿಎಸ್​ ಕಚೇರಿ ಆವರಣದಲ್ಲಿ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿಸಿಎಂ ಡಿಕೆ ಶಿವಕುಮಾರ್​​ರನ್ನು ಬಂಧಿಸುವಂತೆ ಆಗ್ರಹಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ