ಅತ್ಯಾಚಾರ ಕೇಸ್: ಪ್ರಜ್ವಲ್ ರೇವಣ್ಣಗೆ ಶಿಕ್ಷೆ ಪ್ರಕಟ? ಕೋರ್ಟ್ನಲ್ಲಿ ಏನೆಲ್ಲ ನಡೆಯಿತು? ಲೈವ್ ನೋಡಿ
ಬೆಂಗಳೂರಿನ ವಿಶೇಷ ನ್ಯಾಯಾಲಯವು ಮೈಸೂರಿನ ಕೆ.ಆರ್. ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ದೋಷಿಯೆಂದು ಘೋಷಿಸಿದೆ. ಶುಕ್ರವಾರ ದೋಷಿ ತೀರ್ಪು ನೀಡಿದ ನ್ಯಾಯಾಲಯವು ಶಿಕ್ಷೆಯ ಪ್ರಮಾಣವನ್ನು ನಿರ್ಧರಿಸಲು ವಾದ-ಪ್ರತಿವಾದಗಳನ್ನು ಆಲಿಸುತ್ತಿದೆ. ಶೀಘ್ರದಲ್ಲೇ ಶಿಕ್ಷೆಯನ್ನು ಪ್ರಕಟಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಈ ಪ್ರಕರಣವು ರಾಜ್ಯಾದ್ಯಂತ ದೊಡ್ಡ ಪ್ರಮಾಣದ ಚರ್ಚೆಗೆ ಕಾರಣವಾಗಿದೆ.
ಬೆಂಗಳೂರು, ಆಗಸ್ಟ್ 02: ಮೈಸೂರಿನ ಕೆಆರ್ ನಗರದ ಮಹಿಳೆಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಶುಕ್ರವಾರ ತೀರ್ಪು ನೀಡಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ಶಿಕ್ಷೆಯ ಪ್ರಮಾಣ ಪ್ರಕಟಿಸಲು ವಾದ-ಪ್ರತಿ ವಾದ ಆಲಿಸಿದೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಲಿದೆ. ಶಿಕ್ಷ ಪ್ರಕಟವನ್ನು ಲೈವ್ ಆಗಿ ಇಲ್ಲಿ ವೀಕ್ಷಿಸಿ.

