ಪ್ರಜ್ವಲ್ ವಿಡಿಯೋ ಪ್ರಕರಣ: ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರ ಪ್ರಸಾರ

ಪ್ರಜ್ವಲ್ ವಿಡಿಯೋ ಪ್ರಕರಣ: ಕುಮಾರಸ್ವಾಮಿ ಸುದ್ದಿಗೋಷ್ಠಿ ನೇರ ಪ್ರಸಾರ

Ganapathi Sharma
|

Updated on: May 09, 2024 | 2:24 PM

ಪ್ರಜ್ವಲ್ ರೇವಣ್ಣ ಹಾಗೂ ಹೆಚ್​ಡಿ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಹಗರಣ, ಲೈಂಗಿಕ ದೌರ್ಜನ್ಯ, ಕಿಡ್ನಾಪ್ ಪ್ರಕರಣದಲ್ಲಿ ಎಸ್​ಐಟಿ ತನಿಖೆ ಸಮರ್ಪಕವಾಗಿ ಸಾಗುತ್ತಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್‌ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ. ಪ್ರಕರಣದ ಸಂಬಂಧ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಇದೀಗ ಪತ್ರಿಕಾಗೋಷ್ಠಿ ಮೂಲಕ ಅವರು ಮಾತನಾಡುತ್ತಿದ್ದಾರೆ. ಸುದ್ದಿಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಬೆಂಗಳೂರು, ಮೇ 9: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ, ಪೆನ್​ಡ್ರೈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ, ಕಾಂಗ್ರೆಸ್ ಮತ್ತು ಎಸ್​ಐಟಿ ವಿರುದ್ಧ ಈಗಾಗಲೇ ಆಕ್ರೋಶ ಹೊರಹಾಕಿರುವ ಜೆಡಿಎಸ್ ರಾಜ್ಯಾಧ್ಯಕ್ಷ  ಹೆಚ್‌ಡಿ ಕುಮಾರಸ್ವಾಮಿ, ಇದೀಗ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಮಧ್ಯಾಹ್ನ 3ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಿ ದೂರು ನೀಡಲು ಜೆಡಿಎಸ್ ನಿಯೋಗ ನಿರ್ಧರಿಸಿದ ಬೆನ್ನಲ್ಲೇ ಕುಮಾರಸ್ವಾಮಿ ಪತ್ರಿಕಾಗೋಷ್ಠಿ ಕರೆದಿದ್ದಾರೆ. ಪತ್ರಿಕಾಗೋಷ್ಠಿಯ ನೇರ ಪ್ರಸಾರ ಇಲ್ಲಿದೆ.

ಎಸ್‌ಐಟಿ ತನಿಖೆಯನ್ನು ಪಾರದರ್ಶಕವಾಗಿ ನಡೆಸುತ್ತಿಲ್ಲ ಎಂದು ಆರೋಪಿಸಿರುವ ಕುಮಾರಸ್ವಾಮಿ, ಹೆಚ್​ಡಿ ರೇವಣ್ಣ ಕಿಡ್ನಾಪ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯನ್ನು ಕೋರ್ಟ್‌ಗೆ ಯಾಕೆ ಹಾಜರುಪಡಿಸಿಲ್ಲ ಎಂದು ಪ್ರಶ್ನಿಸಿದ್ದಾರೆ. ವಿಡಿಯೋ ಲೀಕ್ ಮಾಡಿದವರ ವಿರುದ್ಧ ಎಸ್​ಐಟಿ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಏಕಮುಖವಾಗಿ ತನಿಖೆ ನಡೆಯುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ರಾಜ್ಯಪಾಲರ ಅಂಗಳಕ್ಕೆ ಪ್ರಜ್ವಲ್ ಪೆನ್‌ಡ್ರೈವ್ ಕೇಸ್: 15 ದಿನದ ತನಿಖೆಯಲ್ಲಿ ಇವರ ಸಾಧನೆ ಏನು, ಹೆಚ್‌ಡಿಕೆ ಪ್ರಶ್ನೆ

ಈ ಮಧ್ಯೆ, ಹೆಚ್​ಡಿ ರೇವಣ್ಣ ಜಾಮೀನು ಅರ್ಜಿ ವಿಚಾರಣೆ 2.45ಕ್ಕೆ ನಡೆಯಲಿದೆ. ಜೆಡಿಎಸ್ ರಾಜ್ಯಪಾಲರಿಗೆ ದೂರು ನೀಡುತ್ತಾ? ಪಕ್ಷದ ಮುಂದಿನ ನಡೆ ಏನಿರಲಿದೆ ಎಂಬುದು ಸದ್ಯಕ್ಕೆ ಕುತೂಹಲ ಮೂಡಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ