ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿದ್ದರಾಮಯ್ಯ ವಿರುದ್ಧ ಪ್ರಲ್ಹಾದ್​​ ಜೋಶಿ ವಾಗ್ದಾಳಿ

Edited By:

Updated on: Jan 08, 2026 | 3:51 PM

ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡೆ ಮೇಲಿನ ಹಲ್ಲೆ ಪ್ರಕರಣ ಸಂಬಂಧ, ಪ್ರಲ್ಹಾದ್​ ಜೋಶಿ ಪೊಲೀಸರ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣಾ ಕರ್ತವ್ಯದ ವೇಳೆ ನಡೆದ ಘಟನೆ, ಪೊಲೀಸರು ಬಿಜೆಪಿ ಕಾರ್ಯಕರ್ತೆಯ ದೂರು ಸ್ವೀಕರಿಸದೆ, ಸುಳ್ಳು ಪ್ರಕರಣ ದಾಖಲಿಸಿದ್ದನ್ನು ಅವರು ಖಂಡಿಸಿದ್ದಾರೆ.

ಬೆಂಗಳೂರು, ಜನವರಿ 08: ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆಯನ್ನ ಅರೆನಗ್ನಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಸಚಿವ ಪ್ರಲ್ಹಾದ್​​ ಜೋಶಿ ಪೊಲೀಸರ ನಡೆ ಮತ್ತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರೆಸ್ಟ್ ಮಾಡಲು ಹೋದಾಗ ಬಿಜೆಪಿ ಕಾರ್ಯಕರ್ತೆಯೇ ಬಟ್ಟೆ ಬಿಚ್ಚಿಕೊಂಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿಕೆ ಕೊಡುತ್ತಾರೆ, ನಾಚಿಕೆ ಆಗಲ್ವಾ ನಿಮಗೆ ಎಂದಿದ್ದಾರೆ. ಇನ್ನು ಅವರು ಬಟ್ಟೆ ಬಿಚ್ಚಿವಾಗ ಪೊಲೀಸರು ಶೂಟಿಂಗ್ ಮಾಡುತ್ತಾ ನಿಂತಿದ್ದರಾ ಎಂದು ಪ್ರಶ್ನಿಸಿದ್ದಾರೆ. ಪ್ರಕರಣ ನ್ಯಾಯೋಚಿತ ತನಿಖೆ ಆಗದಿದ್ದರೆ ನಾವು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.