ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ ವಾಗ್ದಾಳಿ
ಕರ್ನಾಟಕ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗಾರ್ಬೇಜ್ ಟ್ಯಾಕ್ಸ್ ಅಥವಾ ಕಸಕ್ಕೆ ತೆರಿಗೆ ವಿಧಿಸುತ್ತಿರುವುದರ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದ್ದು, ದಿವಾಳಿಯಾಗಿದೆ ಎಂದು ಅವರು ಟೀಕಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ‘ಕಸ’ವಾಗಿ ಪರಿಣಮಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಅವರು, ಕರ್ನಾಟಕ ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿದೆ, ಬಡವಾಗಿದೆ. ಕರ್ನಾಟಕದಲ್ಲಿ ಹಣದುಬ್ಬರ ಹೆಚ್ಚಾಗಿದೆ. ಅಧಿಕಾರಕ್ಕೆ ಬಂದಂದಿನಿಂದಲೂ ಅಗತ್ಯ ವಸ್ತುಗಳ ಬೆಲೆ ಹೆಚ್ಚಿಸುತ್ತಾ ಬಂದ ಕಾಂಗ್ರೆಸ್ ಸರ್ಕಾರ ಈಗ ‘ಕಸ ತೆರಿಗೆ (ಗಾರ್ಬೇಜ್ ಟ್ಯಾಕ್ಸ್)’ ವಿಧಿಸುತ್ತಿದೆ. ಇದನ್ನು ಖಂಡಿಸುತ್ತೇನೆ ಎಂದರು.
Published on: Apr 01, 2025 01:16 PM
Latest Videos