AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಲವ್ ಜಿಹಾದ್ ಪ್ರಕರಣ ಕಾಂಗ್ರೆಸ್​​​ ಇರೋ ಕಡೆ ಮಾತ್ರ ಹೆಚ್ಚಾಗುತ್ತಿದೆ: ಸಚಿವ ಪ್ರಹ್ಲಾದ್ ಜೋಶಿ

ಅಕ್ಷಯ್​ ಪಲ್ಲಮಜಲು​​
|

Updated on: Apr 11, 2026 | 4:04 PM

Share

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಲವ್ ಜಿಹಾದ್ ಪ್ರಕರಣಗಳ ಹೆಚ್ಚಳದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಇದು ವ್ಯವಸ್ಥಿತ ಜಾಲವಾಗಿದ್ದು, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಹೆಚ್ಚು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ಪೊಲೀಸ್ ವರ್ಗಾವಣೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಧಾರವಾಡ, ಏ.11: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಪೊಲೀಸ್ ಇಲಾಖೆಯಲ್ಲಿನ ವರ್ಗಾವಣೆ ದಂಧೆ ಮತ್ತು ವ್ಯಾಪಕ ಭ್ರಷ್ಟಾಚಾರದಿಂದಾಗಿ ಈ ಪರಿಸ್ಥಿತಿ ಉದ್ಭವಿಸಿದೆ ಎಂದು ಅವರು ಹೇಳಿದರು. ಇತ್ತೀಚೆಗೆ ಒಬ್ಬ ಕಾಂಗ್ರೆಸ್ ಮುಖಂಡ ಇನ್ನೊಬ್ಬ ಕಾಂಗ್ರೆಸ್ ಮುಖಂಡನನ್ನು ಕೊಲೆ ಮಾಡಿರುವ ಘಟನೆ ಕಾನೂನು ಸುವ್ಯವಸ್ಥೆಯ ದುಸ್ಥಿತಿಗೆ ಉದಾಹರಣೆಯಾಗಿದೆ. ಕಾಂಗ್ರೆಸ್ ಮುಖಂಡರಿಗೆ ರಕ್ಷಣೆಯಿಲ್ಲದಂತಹ ಸ್ಥಿತಿ ಬಂದಿರುವುದು ಆತಂಕಕಾರಿಯಾಗಿದೆ ಎಂದು ಜೋಶಿ ತಿಳಿಸಿದರು. ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿರುವುದರ ಕುರಿತು ಪ್ರತಿಕ್ರಿಯಿಸಿದ ಅವರು, ಇದು ವ್ಯವಸ್ಥಿತವಾದ ಜಾಲವಾಗಿದ್ದು, ಇಡೀ ದೇಶದಲ್ಲಿ ನಡೆಯುತ್ತಿದೆ. ವಿಶೇಷವಾಗಿ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ ಎಂದು ಆರೋಪಿಸಿದರು. ಈ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇಲ್ಲದಿದ್ದರೆ, ಜನ ಬೀದಿಗಳಿಯುವಂತಹ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ತರಬಾರದು ಎಂದು ಪ್ರಹ್ಲಾದ್ ಜೋಶಿ ಎಚ್ಚರಿಕೆ ನೀಡಿದರು.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us