AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬು ಬೆಳೆಗಾರರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಧ್ಯರಾತ್ರಿ ಮಹತ್ವದ ಸಭೆ ಯಶಸ್ವಿ

ಕಬ್ಬು ಬೆಳೆಗಾರರ ಜೊತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಧ್ಯರಾತ್ರಿ ಮಹತ್ವದ ಸಭೆ ಯಶಸ್ವಿ

ಸಂಜಯ್ಯಾ ಚಿಕ್ಕಮಠ
| Edited By: |

Updated on: Oct 19, 2026 | 7:42 AM

Share

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಹುಬ್ಬಳ್ಳಿಯ ಐಬಿಯಲ್ಲಿ ಮಧ್ಯರಾತ್ರಿ ನಡೆದ ಕಬ್ಬು ಬೆಳೆಗಾರರ ಸಭೆ ಯಶಸ್ವಿಯಾಗಿದೆ. ರೈತರ ಪ್ರಮುಖ ಬೇಡಿಕೆಗಳಾದ ಎಂಎಸ್‌ಪಿ ಹೆಚ್ಚಳ ಮತ್ತು ಎಥೆನಾಲ್ ದರ ನಿಗದಿ ಬಗ್ಗೆ ಸಕಾರಾತ್ಮಕವಾಗಿ ಚರ್ಚಿಸಲಾಗಿದೆ. ತಾತ್ಕಾಲಿಕವಾಗಿ ಹೋರಾಟ ಹಿಂಪಡೆಯಲು ರೈತ ಮುಖಂಡರು ಒಪ್ಪಿದ್ದು, ಗಡುವು ಮೀರಿದರೆ ಮತ್ತೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಹುಬ್ಬಳ್ಳಿ, ಅಕ್ಟೋಬರ್ 19: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನೇತೃತ್ವದಲ್ಲಿ ಹುಬ್ಬಳ್ಳಿ-ಧಾರವಾಡದ ಐಬಿಯಲ್ಲಿ ಕಬ್ಬು ಬೆಳೆಗಾರರೊಂದಿಗೆ ನಡೆದ ಮಹತ್ವದ ಸಭೆ ಯಶಸ್ವಿಯಾಗಿದೆ. ಭಾನುವಾರ ಮಧ್ಯರಾತ್ರಿ ನಡೆದ ಈ ಸಭೆಯಲ್ಲಿ ರೈತ ಮುಖಂಡ ಹಾಗೂ ಹೋರಾಟದ ನೇತೃತ್ವ ವಹಿಸಿರುವ ಚೂನಪ್ಪ ಪೂಜಾರಿ, ಶಶಿಕಾಂತ್ ಗುರೂಜಿ ಸೇರಿದಂತೆ ಎಂಟು ರೈತ ಮುಖಂಡರು ಭಾಗವಹಿಸಿದ್ದರು. ಸಂಸದ ಜಗದೀಶ್ ಶೆಟ್ಟರ್, ಮಹೇಶ್ ಟೆಂಗಿನಕಾಯಿ, ಸಿ.ಸಿ. ಪಾಟೀಲ್, ಧಾರವಾಡ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.

ಸಭೆಯ ಆರಂಭದಲ್ಲಿ ಪ್ರಲ್ಹಾದ್ ಜೋಶಿ ಅವರು ರೈತ ನಾಯಕರ ಆರೋಗ್ಯ ವಿಚಾರಿಸಿ, ಅವರ ಬೇಡಿಕೆಗಳನ್ನು ಆಲಿಸಿದರು. ಎಂಎಸ್‌ಪಿ (ಕನಿಷ್ಠ ಬೆಂಬಲ ಬೆಲೆ) ಹೆಚ್ಚಳ, ವಾಣಿಜ್ಯ ಸಕ್ಕರೆ ಮಾರಾಟ ಮತ್ತು ಎಥೆನಾಲ್ ದರ ₹100 ನಿಗದಿಪಡಿಸುವ ಕುರಿತು ರೈತರು ಒತ್ತಾಯಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಮಿತಿ ರಚನೆ, ಸಮೀಕ್ಷೆ ಮತ್ತು ಸಿಎಸಿಪಿ ವರದಿ ಪಡೆದು ನಿರ್ಧಾರ ಕೈಗೊಳ್ಳಲು ಕಾಲಾವಕಾಶ ಕೇಳಿದ್ದಾರೆ. ರೈತ ಮುಖಂಡರು ಮಾನವೀಯ ದೃಷ್ಟಿಯಿಂದ ಅವರ ಮನವಿಗೆ ಸ್ಪಂದಿಸಿ, ತಾತ್ಕಾಲಿಕವಾಗಿ ಹೋರಾಟವನ್ನು ಸ್ಥಗಿತಗೊಳಿಸಲು ಒಪ್ಪಿದ್ದಾರೆ. ಆದರೆ, ನಿಗದಿತ ಅವಧಿಯಲ್ಲಿ ಬೇಡಿಕೆಗಳು ಈಡೇರದಿದ್ದರೆ ಹೋರಾಟ ಪುನರಾರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More