ಹುಬ್ಬಳ್ಳಿಯಲ್ಲಿ ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದೆಹಲಿಯಲ್ಲಿ ಸಭೆ: ಡಿಕೆಶಿಗೂ ಆಹ್ವಾನ
ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಮೊನ್ನೇ ಹುಬ್ಬಳ್ಳಿಯಲ್ಲಿ ನಡೆದ ರೈತ ಸಮಾವೇಶ ಭಾರೀ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಕಬ್ಬಿನ ಎಂಎಸ್‌ಪಿ ಕುರಿತು ಚರ್ಚಿಸಲು ಅಕ್ಟೋಬರ್ 12ರ ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ರೈತರ ಸಭೆ ಕರೆಯಲಾಗಿದೆ. ನವದೆಹಲಿಯ ಕೃಷಿ ಭವನದಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಹ ಇರಲಿದ್ದಾರೆ.
ಬೆಂಗಳೂರು, (ಅಕ್ಟೋಬರ್ 02): ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ಮೊನ್ನೇ ಹುಬ್ಬಳ್ಳಿಯಲ್ಲಿ ನಡೆದ ರೈತ ಸಮಾವೇಶ ಭಾರೀ ಸದ್ದು ಮಾಡಿದೆ. ಇದರ ಬೆನ್ನಲ್ಲೇ ಕಬ್ಬಿನ ಎಂಎಸ್‌ಪಿ ಕುರಿತು ಚರ್ಚಿಸಲು ಅಕ್ಟೋಬರ್ 12ರ ಮಧ್ಯಾಹ್ನ 3 ಗಂಟೆಗೆ ದೆಹಲಿಯಲ್ಲಿ ರೈತರ ಸಭೆ ಕರೆಯಲಾಗಿದೆ. ನವದೆಹಲಿಯ ಕೃಷಿ ಭವನದಲ್ಲಿ ಆಯೋಜಿಸಲಾಗಿರುವ ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸಹ ಇರಲಿದ್ದಾರೆ. ಇನ್ನು ಈ ಸಭೆಯಲ್ಲಿ ಪಾಲ್ಗೊಳ್ಳಲು ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೂ ಆಹ್ವಾನ ನೀಡಲಾಗಿದೆ. ಈ ಸಂಬಂಧ ಜೋಶಿ, ಡಿಕೆಶಿಗೆ ಪತ್ರ ಬರೆದಿದ್ದು, ಸಭೆಗೆ ಆಹ್ವಾನ ಕೊಟ್ಟಿದ್ದಾರೆ. ಈ ಸಭೆ ರಾಜ್ಯದ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಮತ್ತು ರಚನಾತ್ಮಕವಾಗಿ ಚರ್ಚಿಸಲು ಉತ್ತಮ ಅವಕಾಶವನ್ನು ಒದಗಿಸಲಿದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
