ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ
ಲೋಕಸಭಾ ಚುನಾವಣೆಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಗೋಪಾಲ್ ಜೋಶಿ ಅರೆಸ್ಟ್ ಮಾಡಲಾಗಿದೆ. ಇತ್ತ ಹುಬ್ಬಳ್ಳಿಯಲ್ಲಿ ದೂರುದಾರೆ ಸುನೀತಾ ಚೌಹಾಣ್ ಮಾತನಾಡಿದ್ದು, ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಹುಬ್ಬಳ್ಳಿ, ಅಕ್ಟೋಬರ್ 19: ಲೋಕಸಭಾ ಚುನಾವಣೆಗೆ ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಸಹೋದರ ಗೋಪಾಲ್ ಜೋಶಿ ಬಂಧನವಾಗಿದೆ. ಸದ್ಯ ಈ ವಿಚಾರವಾಗಿ ದೂರುದಾರೆ ಸುನೀತಾ ಚೌಹಾಣ್ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಈ ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಅವರ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಟಿಕೆಟ್ ಕೊಡಿಸುವುದಾಗಿ ಗೋಪಾಲ್ ಜೋಶಿ 2 ಕೋಟಿ ರೂ. ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಹಣ ಪಡೆದಿದ್ದರು. ಆದರೆ ಟಿಕೆಟ್ ಸಿಗದಿದ್ದಾಗ ಕೊಟ್ಟ ಹಣ ವಾಪಸ್ ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ಕೊಟ್ಟಿದ್ದೇವೆ. ಇದರಲ್ಲಿ ಹೈಕಮಾಂಡ್ ಹೆಸರನ್ನ ದುರ್ಬಳಕೆ ಮಾಡಿಕೊಳ್ಳಲಾಗಿದೆ. ಕೇಂದ್ರದ ಯಾವ ನಾಯಕರನ್ನು ಭೇಟಿ ಆಗಿಲ್ಲ. ನೇರವಾಗಿ ಗೋಪಾಲ್ ಜೋಶಿ ಅವರಿಗೆ ದುಡ್ಡು ಕೊಟ್ಟಿದ್ದೇನೆ. ಬಿಜೆಪಿಯಿಂದ ಟಿಕೆಟ್ ಕೊಡಿಸುತ್ತೇನೆ ಅಂದ್ದರು ಎಂದು ಹೇಳಿದ್ದಾರೆ.
ಇದನ್ನೂ ಓದಿ: ಟಿಕೆಟ್ ಕೊಡಿಸುವುದಾಗಿ 2 ಕೋಟಿ ರೂ ವಂಚನೆ ಪ್ರಕರಣ: ಗೋಪಾಲ್ ಜೋಶಿ ಬಂಧನ
ಇನ್ನು ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ಗೋಪಾಲ್ ಜೋಶಿ ನಿವಾಸಕ್ಕೆ ದೂರುದಾರೆ ಸುನೀತಾ ಚೌಹಾಣ್ರನ್ನು ಕರೆತಂದ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ. ಗೋಪಾಲ್ ಜೋಶಿ ನಿವಾಸದಲ್ಲಿ ಪೊಲೀಸರಿಂದ ಪಂಚನಾಮೆ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.