ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾಗಿ

Edited By:

Updated on: Jun 21, 2026 | 9:37 AM

ಬೆಳಗಾವಿಯ ಸುವರ್ಣಸೌಧದಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಶಶಾಂಕಾಸನ, ನಾಡಿಶೋಧನ ಪ್ರಾಣಾಯಾಮ ಸೇರಿದಂತೆ ವಿವಿಧ ಯೋಗಾಭ್ಯಾಸಗಳನ್ನು ಪ್ರದರ್ಶಿಸಲಾಯಿತು. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯ ಸುಧಾರಣೆಗೆ, ಒತ್ತಡ ನಿವಾರಣೆಗೆ ಹಾಗೂ ರಕ್ತಪರಿಚಲನೆ ಹೆಚ್ಚಿಸಲು ಸಹಕಾರಿ ಎಂದು ತಿಳಿಸಲಾಯಿತು.

ಬೆಳಗಾವಿ, ಜೂನ್​​ 21: ಸುವರ್ಣಸೌಧದ ಮುಂಭಾಗದಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ಡಿಸಿ ಮೊಹಮ್ಮದ್ ರೋಷನ್, ಕಮಿಷನರ್ ಭೂಷಣ ಬೋರಸೆ, ಜಿ.ಪಂ. ಸಿಇಒ ರಾಹುಲ್ ಶಿಂಧೆ ಸೇರಿದಂತೆ ಹಲವು ಗಣ್ಯರು ಮತ್ತು ನೂರಾರು ಜನರು ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jun 21, 2026 09:35 AM
Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More