AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ!

ಹುಬ್ಬಳ್ಳಿಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ!

ಸಂಜಯ್ಯಾ ಚಿಕ್ಕಮಠ
| Edited By: |

Updated on:Oct 02, 2026 | 10:22 AM

Share

ಮಹಾತ್ಮಾ ಗಾಂಧಿ ಜಯಂತಿ ಅಂಗವಾಗಿ ಹುಬ್ಬಳ್ಳಿಯ ಸಾಯಿನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿ, ಪೊರಕೆ ಹಿಡಿದು ಕಸ ಗುಡಿಸಿದರು. ಈ ವೇಳೆ ಮಾತನಾಡಿದ ಅವರು, ಭಾರತ ವಿಕಸಿತ ದೇಶವಾಗಲು ಸ್ವಚ್ಛತೆ ಮುಖ್ಯವಾಗಿದ್ದು, ಪ್ರಧಾನಿ ಮೋದಿ ಅವರ 25 ವರ್ಷಗಳ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ 'ಸೇವಾ ಸಪ್ತಾಹ' ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ಹುಬ್ಬಳ್ಳಿ, ಅಕ್ಟೋಬರ್ 02: ಮಹಾತ್ಮಾ ಗಾಂಧೀಜಿ ಅವರ ಜಯಂತಿ ಅಂಗವಾಗಿ ಹುಬ್ಬಳ್ಳಿ ನಗರದ ಸಾಯಿನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಅಭಿಯಾನದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭಾಗವಹಿಸಿ, ಸ್ವತಃ ಪೊರಕೆ ಹಿಡಿದು ರಸ್ತೆ ಕಸ ಗುಡಿಸಿ ಗಮನ ಸೆಳೆದರು. ಸ್ವಚ್ಛತಾ ಕಾರ್ಯಕ್ರಮದ ಬಳಿಕ ಮಾತನಾಡಿದ ಸಚಿವರು, “ಭಾರತ ವಿಕಸಿತ ದೇಶವಾಗಬೇಕಾದರೆ ಸ್ವಚ್ಛತೆ ಅತ್ಯಗತ್ಯ. ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕ ಸೇವೆಯಲ್ಲಿ 25 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ‘ಸೇವಾ ಸಪ್ತಾಹ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೇಶದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ,” ಎಂದರು.

ಅಲ್ಲದೆ, “ಇದು ಜಗನ್ನಾಥ ರಥೋತ್ಸವ ಇದ್ದಂತೆ, ಪ್ರತಿಯೊಬ್ಬರೂ ರಥದ ಹಗ್ಗ ಹಿಡಿದು ಎಳೆದರೆ ಪುಣ್ಯ ಬರುತ್ತದೆ,” ಎಂದು ಸ್ವಚ್ಛತೆ ಮತ್ತು ದೇಶಸೇವೆಯಲ್ಲಿ ಪ್ರತಿಯೊಬ್ಬರೂ ಕೈಜೋಡಿಸುವಂತೆ ಕರೆ ನೀಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Oct 02, 2026 10:17 AM

Follow Us
ಸಂಜಯ್ಯಾ ಚಿಕ್ಕಮಠ
ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More