AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫಸ್ಟ್​​ ರಿಯಾಕ್ಷನ್​​

ಶಿಕ್ಷಣ ಖಾತೆಯ ಹೆಚ್ಚುವರಿ ಹೊಣೆ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಫಸ್ಟ್​​ ರಿಯಾಕ್ಷನ್​​

ಪ್ರಸನ್ನ ಹೆಗಡೆ
|

Updated on:Jul 26, 2026 | 6:29 AM

Share

ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿರುವ ಪ್ರಲ್ಹಾದ್ ಜೋಶಿ, ಈ ಮಹತ್ವದ ಹೊಣೆಯನ್ನು ವಿನಯ ಮತ್ತು ಕರ್ತವ್ಯದ ಭಾವನೆಯಿಂದ ಸ್ವೀಕರಿಸಿರುವುದಾಗಿ ತಿಳಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿ, ಅವರ ಮಾರ್ಗದರ್ಶನದಲ್ಲಿ ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ. ಹಿಂದಿನ ಸಾಧನೆಗಳನ್ನು ಸ್ಮರಿಸಿದ ಅವರು, ಹೊಸ ಶಿಕ್ಷಣ ನೀತಿಯ ಪ್ರಗತಿಯನ್ನು ಶ್ಲಾಘಿಸಿದ್ದಾರೆ.

ನವದೆಹಲಿ, ಜುಲೈ 26: ಕೇಂದ್ರ ಶಿಕ್ಷಣ ಖಾತೆಯ ಹೆಚ್ಚುವರಿ ಜವಾಬ್ದಾರಿಯ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಮೇಲೆ ನಂಬಿಕೆ ಇಟ್ಟು ಈ ಜವಾಬ್ದಾರಿ ನೀಡಿದ್ದಾರೆ. ಈ ಜವಾಬ್ದಾರಿಯನ್ನು ಮಾನ್ಯ ಪ್ರಧಾನ ಮಂತ್ರಿಗಳ ಅಪೇಕ್ಷೆಯಂತೆ ನಾನು ನಿಭಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ. ಇದೇ ವೇಳೆ ಕಳೆದ 12 ವರ್ಷಗಳಲ್ಲಿ ಪ್ರಧಾನಮಂತ್ರಿ ಮೋದಿ ಸರ್ಕಾರವು ಅನೇಕ ಐತಿಹಾಸಿಕ ಸಾಧನೆಗಳನ್ನು ಮಾಡಿದೆ ಎಂಬುದನ್ನು ಸ್ಮರಿಸಿದ ಅವರು, ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರೀಯ ಹೊಸ ಶಿಕ್ಷಣ ನೀತಿಯನ್ನು ಸಮರ್ಥವಾಗಿ ಜಾರಿಗೊಳಿಸಿರುವುದನ್ನೂ ಶ್ಲಾಘಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Jul 26, 2026 06:28 AM

Follow Us