ಕಾಂಗ್ರೆಸ್ಸಿಗರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಪ್ರಲ್ಹಾದ್ ಜೋಶಿ

ಕಾಂಗ್ರೆಸ್ಸಿಗರ ಮಾತು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ: ಪ್ರಲ್ಹಾದ್ ಜೋಶಿ

ನಯನಾ ರಾಜೀವ್
|

Updated on:Dec 06, 2024 | 12:35 PM

ಭೂತದ ಬಾಯಲ್ಲಿ ಭಗವದ್ಗೀತೆ ಕೇಳಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕಾಂಗ್ರೆಸ್ ಹಲವು ಬಾರಿ ಸಂವಿಧಾನಕ್ಕೆ ಅಪಮಾನ ಮಾಡಿದೆ. ಎಮರ್ಜೆನ್ಸಿ ಸಂದರ್ಭದಲ್ಲಿ ಅವರು ಏನು ಮಾಡಿದ್ದರು ಎಂಬುದು ಎಲ್ಲರಿಗೂ ತಿಳಿದೇ ಇದೆ, ಬಾಬಾ ಸಾಹೇಬ್ ಅಂಬೇಡ್ಕರ್​ಗೂ ಕೂಡ ಅಪಮಾನ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ಸಿಗರ ಮಾತು  ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕಾಂಗ್ರೆಸ್ ಹಲವು ಬಾರಿ ಸಂವಿಧಾನಕ್ಕೆ ಅಪಮಾನ ಮಾಡಿದೆ. ಸಂವಿಧಾನದ ಪ್ರತಿ ಹಿಡಿದು ಹೋದ ಮಾತ್ರಕ್ಕೆ ಜನ ಕಾಂಗ್ರೆಸ್ ಪಕ್ಷವನ್ನು ನಂಬಲಾರರು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಾಂಗ್ರೆಸ್ ನಾಯಕರಿಗೆ ಚಾಟಿ ಬೀಸಿದರು. ಕಾಂಗ್ರೆಸ್ ಪಕ್ಷದವರು ದೇಶದ ಸಂವಿಧಾನ ಮತ್ತು ಸಂವಿಧಾನ ಶಿಲ್ಪಿಗೆ ಹೇಗೆ ಅಪಮಾನ ಮಾಡಿದ್ದಾರೆ ಎಂಬುದು ಜನಕ್ಕೆ ಗೊತ್ತಿದೆ. ಹಾಗಾಗಿ ಸಂವಿಧಾನದ ಪ್ರತಿ ಹಿಡಿದು ಹೋದಕ್ಷಣ ಜನ ಮರುಳಾಗಲ್ಲ ಎಂದು ಹೇಳಿದರು.

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಸಂವಿಧಾನಕ್ಕೆ ಹೇಗೆ ಅಪಮಾನ ಮಾಡಿದರು. ಅಂಬೇಡ್ಕರ್ ಅವರನ್ನು ಎಷ್ಟು ಅಪಮಾನದಿಂದ ನಡೆಸಿಕೊಂಡರು ಎಂಬುದು ಜನಕ್ಕೆ ಗೊತ್ತಿದೆ ಎಂದು ಪ್ರತಿಕ್ರಿಯಿಸಿದರು.

ಕಾಂಗ್ರೆಸ್ ನಾಯಕರು ಹಿಂದಿನಿಂದಲೂ ಸಂವಿಧಾನ ರಚನೆಕಾರ ಡಾ.ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಲೇ ಬಂದಿದ್ದಾರೆ. ರಾಹುಲ್ ಗಾಂಧಿ ಈಗ ಸಂವಿಧಾನದ ಪ್ರತಿ ಹಿಡಿದು ಹೊರಟಿದ್ದಾರೆ ಎಂದು ಜೋಶಿ ಟೀಕಿಸಿದರು.
ದೇಶದ ಬಹುತೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದಾರೆ ಎಂದ ಸಚಿವ ಜೋಶಿ, ಕಾಂಗ್ರೆಸ್ ನಾಯಕರಿಗೆ ಸಂವಿಧಾನದ ಮೇಲೆ ಅಷ್ಟು ಗೌರವವಿದ್ದರೆ ಸಂಸತ್ ಅಧಿವೇಶನಕ್ಕೆ ಸಹಕಾರ ನೀಡಲಿ ಮತ್ತು ಸದನವನ್ನು ಸುಗಮಗೊಳಿಸಲಿ ಎಂದು ಹೇಳಿದರು.

ದೇಶದ ಅನೇಕ ರಾಜ್ಯಗಳಲ್ಲಿ ಜನರು ಈಗಾಗಲೇ ನಿಮಗೆ ಪಾಠ ಕಲಿಸಿದ್ದಾರೆ, ಈಗಲಾದರೂ ಬುದ್ಧಿ ಕಲಿತುಕೊಳ್ಳಿ, ಸಂಸತ್ ಅಧಿವೇಶನ ಸುಸೂತ್ರವಾಗಿ ನಡೆಸಲು ಸಹಕಾರ ನೀಡಿ ಎಂದು ಕೇಳಿದ್ದಾರೆ. ರೈತರ ಪ್ರತಿಭಟನೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದನ್ನು ಸಂಬಂಧಪಟ್ಟ ಸಚಿವಾಲಯ ಗಮನಿಸುತ್ತಿದೆ, ಇದರ ಬಗ್ಗೆ ಹೆಚ್ಚಿನ ಮಾಹಿತಿ ತಮಗಿಲ್ಲ ಎಂದು ಹೇಳಿದರು.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Dec 06, 2024 11:49 AM