AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ​​: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ವಿದ್ಯುತ್ ಚಾಲಿತ ವಾಹನಗಳಿಗೂ ಇನ್ನು ತೆರಿಗೆ​​: ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ ಕಿಡಿ

ಕಿರಣ್​ ಹನಿಯಡ್ಕ
| Edited By: |

Updated on: Apr 03, 2026 | 1:02 PM

Share

ಕರ್ನಾಟಕ ಸರ್ಕಾರವು ವಿದ್ಯುತ್ ಚಾಲಿತ ವಾಹನಗಳ ತೆರಿಗೆ ವಿನಾಯಿತಿಯನ್ನು ಹಿಂಪಡೆದಿದೆ. ಇದು ಇವಿ ಉತ್ತೇಜನದ ಜಾಗತಿಕ ಪ್ರಯತ್ನಕ್ಕೆ ಹಿನ್ನಡೆ ನೀಡುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕ್ರಮದಿಂದ ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಪ್ರೋತ್ಸಾಹ ಸಿಕ್ಕು, ದೇಶದ ಆರ್ಥಿಕತೆಗೆ ಮತ್ತು ಪರಿಸರಕ್ಕೆ ಹಾನಿಯಾಗಲಿದೆ. ಸರ್ಕಾರ ತಕ್ಷಣ ನಿರ್ಧಾರ ಹಿಂಪಡೆಯುವಂತೆ ಅವರು ಆಗ್ರಹಿಸಿದ್ದಾರೆ.

ಬೆಂಗಳೂರು, ಏಪ್ರಿಲ್​​ 03: ವಿದ್ಯುತ್ ಚಾಲಿತ ವಾಹನಗಳಿಗೆ ಇಲ್ಲಿಯವರೆಗೆ ನೀಡಲಾಗಿದ್ದ ತೆರಿಗೆ (Tax) ವಿನಾಯಿತಿಯನ್ನು ಹಿಂಪಡೆದ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ದೇಶ ಮತ್ತು ಜಗತ್ತಿನಲ್ಲಿ ವಿದ್ಯುತ್ ವಾಹನಗಳತ್ತ ಸಾಗುವ ಪ್ರಯತ್ನಕ್ಕೆ ದೊಡ್ಡ ಹಿನ್ನಡೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕ್ರಮವು ಜನರನ್ನು ಮತ್ತೆ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳತ್ತ ಸೆಳೆಯಲು ಪ್ರೋತ್ಸಾಹ ನೀಡಿದಂತಾಗುತ್ತದೆ. ಇದರಿಂದ ಮಾಲಿನ್ಯ ಹೆಚ್ಚಾಗುವುದಲ್ಲದೆ, ಕಚ್ಚಾ ತೈಲ ಆಮದಿನ ಮೇಲೆ ದೇಶದ ಅವಲಂಬನೆ ಹೆಚ್ಚುತ್ತದೆ. ಪ್ರಸ್ತುತ ಜಾಗತಿಕ ಅಸ್ಥಿರತೆಯಿಂದ ಕಚ್ಚಾ ತೈಲ ಬೆಲೆ ಗಗನಕ್ಕೇರುತ್ತಿರುವಾಗ ಈ ನಿರ್ಧಾರ ಸರಿಯಲ್ಲ. ಕೇವಲ 250 ಕೋಟಿ ರೂಪಾಯಿ ಆದಾಯಕ್ಕಾಗಿ ಮೂರೂವರೆ ಲಕ್ಷ ಕೋಟಿ ರೂಪಾಯಿ ಬಜೆಟ್ ಹೊಂದಿರುವ ರಾಜ್ಯ ಸರ್ಕಾರ ಇಂತಹ ಕ್ರಮಕ್ಕೆ ಮುಂದಾಗಿರುವುದು ಖಂಡನೀಯ ಎಂದು ಜೋಶಿ ಹೇಳಿದ್ದಾರೆ. ಸರ್ಕಾರ ತಕ್ಷಣ ಈ ನಿರ್ಧಾರವನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us